ಕಾಂಗ್ರೆಸ್ ದಲಿತರನ್ನು ಬಲಿಪಶು ಮಾಡಿದೆ: ಅಧ್ಯಕ್ಷರಾಗಿ ಖರ್ಗೆ ಆಯ್ಕೆಯ ಬಳಿಕ ಮಾಯಾವತಿ

Prasthutha|

ಲಕ್ನೋ: 137 ವರ್ಷಗಳ ಹಿಂದಿನ ಕಾಂಗ್ರೆಸ್ ಪಕ್ಷವು, ತನ್ನ ಅವಧಿಯಲ್ಲಿ ದಲಿತರನ್ನು ಕೆಟ್ಟದಾಗಿ ನಡೆಸಿಕೊಂಡಿದೆ ಮತ್ತು ಅವರನ್ನು ಬಲಿಪಶುಗಳನ್ನಾಗಿ ಮಾಡಿದೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಆರೋಪಿಸಿದ್ದಾರೆ.

- Advertisement -

ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಒಂದು ದಿನದ ಬಳಿಕ ಅವರು ಈ ಮೇಲಿನ ಹೇಳಿಕೆ ನೀಡಿದ್ದಾರೆ.

ಕರ್ನಾಟಕದ ಹಿರಿಯ ಕಾಂಗ್ರೆಸ್ ಮುಖಂಡ, ದಲಿತ ನಾಯಕ ಅವರು ನಾಲ್ಕು ದಿನಗಳ ಹಿಂದೆ ನಡೆದ ಪಕ್ಷದ ಆಂತರಿಕ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್ ಅವರನ್ನು ಸೋಲಿಸಿ ಕಾಂಗ್ರೆಸ್’ನ ಅಧ್ಯಕ್ಷರಾಗುವ ಮೂಲಕ 24 ವರ್ಷಗಳ ಬಳಿಕ ಮೊದಲ ಗಾಂಧೀಯೇತರ ಅಧ್ಯಕ್ಷರು ಎಂಬ ಹೆಗ್ಗಳಿಕೆಗೆ ಪಾತ್ರರಾದರು.

- Advertisement -

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಯಾವತಿ, ಕಾಂಗ್ರೆಸ್’ನ ಇತಿಹಾಸವು ಬಾಬಾಸಾಹೇಬ್ ಡಾ. ಭೀಮರಾವ್ ರಾಮ್‌ಜೀ ಅಂಬೇಡ್ಕರ್ ಮತ್ತು ಅವರ ಸಮಾಜವನ್ನು ಯಾವಾಗಲೂ ನಿರ್ಲಕ್ಷಿಸಿರುವುದಕ್ಕೆ ಸಾಕ್ಷಿಯಾಗಿದೆ. ಈ ಪಕ್ಷವು ಅಧಿಕಾರದಲ್ಲಿದ್ದಾಗ ದಲಿತರ ಸುರಕ್ಷತೆ ಮತ್ತು ಗೌರವವನ್ನು ನೀಡುವಲ್ಲಿ ಕೆಲಸ ಮಾಡಿಲ್ಲ. ಆದರೆ ಅಧಿಕಾರದಲ್ಲಿ ಇಲ್ಲದಾಗ ಅವರನ್ನು ಬಲಿಪಶುವನ್ನಾಗಿ ಮಾಡಿದೆ ಎಂದು ತಿಳಿಸಿದರು.

ಗಾಂಧಿ ಕುಟುಂಬಕ್ಕೆ ನಿಷ್ಠಾವಂತರಾಗಿರುವ ಖರ್ಗೆ ಅವರು ಅಕ್ಟೋಬರ್ 26ರಂದು ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಲಿದ್ದಾರೆ. ಕಾರಣ ಅವರು ಸಂಕಷ್ಟದಲ್ಲಿರುವ ಕಾಂಗ್ರೆಸ್ ಅನ್ನು ಹೊರ ತೆಗೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಮಾಯಾವತಿ ಆರೋಪಿದರು.

Join Whatsapp