ಖರ್ಗೆ ಅವರಿಂದಲೇ ಕಾಂಗ್ರೆಸ್ ಸರ್ವನಾಶ: ಶಿವರಾಜ್ ಸಿಂಗ್ ಚೌಹಾಣ್

Prasthutha|

ಬೀದರ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡಲಿದ್ದಾರೆ ಎಂದು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ,ಆದ ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಬೀದರ್‌ನಲ್ಲಿ ಹೇಳಿದ್ದಾರೆ.

- Advertisement -

ಪಟ್ಟಣದ ತೇರು ಮೈದಾನದಲ್ಲಿ ಬುಧವಾರ ಸಂಜೆ ಏರ್ಪಡಿಸಿದ್ದ ಬೀದರ್ ಮತ್ತು ಕಲಬುರಗಿ ಲೋಕಸಭಾ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆಗೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡಲಲು ಸಹಕರಿಸಲಿದ್ದಾರೆ ಎಂದರು.

ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆ ಆಗಬೇಕಾದರೆ ಬೂತ್ ಮಟ್ಟದ ಕಾರ್ಯಕರ್ತರ ಶ್ರಮ ಅಗತ್ಯ. ‘ಗಾಂವ್ ಚಲೋ’ ಅಭಿಯಾನದ ಮೂಲಕ ಗ್ರಾಮಸ್ಥರಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ತಿಳಿವಳಿಕೆ ಮೂಡಿಸಬೇಕು. ಬೀದರ್ ಮತ್ತು ಕಲಬುರಗಿ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಕಳೆದ ಸಲಕ್ಕಿಂತಲೂ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ತಿಳಿಸಿದರು.



Join Whatsapp