ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಪ್ರಾರಂಭವಾಗಿದೆ: ಸಿದ್ದರಾಮಯ್ಯ

Prasthutha|

ಬೆಳಗಾವಿ: ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಅಲೆ ಪ್ರಾರಂಭವಾಗಿದ್ದು, ಬಿಜೆಪಿ ಪಕ್ಷ ದಮ್ಮ ಇಲ್ಲದ ಪಕ್ಷ ಎನ್ನುವುದು ಬಿಜೆಪಿಯವರಿಗೆ ಗೊತ್ತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

- Advertisement -

ಮಂಗಳವಾರ ಸುವರ್ಣ ವಿಧಾನ ಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಬೇರು ಮತ್ತೆ ಗಡ್ಡಿಗೊಳ್ಳುತ್ತಿದೆ. ಇದು ಜಾನಾಭಿಪ್ರಾಯದ ಚುನಾವಣೆ ಅಲ್ಲ. ಇದು ಕೇವಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಕೊಟ್ಟಿರುವ ತೀರ್ಪು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಪ್ರಾರಂಭವಾಗಿದೆ ಎಂದರು.

ಬೆಳಗಾವಿಯಲ್ಲಿ ಬಿಜೆಪಿ ಸೋಲಿಸಲು ಸ್ವತಂತ್ರ ಅಭ್ಯರ್ಥಿಯನ್ನು ಕಣಕ್ಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಸೋಲಿಗೆ ರಮೇಶ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರೇ ಕಾರಣ ಎಂದು ದೂರಿದರು.

- Advertisement -

ಅದೇ ರೀತಿ, ಚಿಕ್ಕಮಂಗಳೂರಿನಲ್ಲಿ ಗಾಯತ್ರಿ ಅವರು ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ ಎಂದು ನಾವು ಭಾವಿಸಿದ್ದೆವು. ಆದರೆ ಕೇವಲ ನಾಲ್ಕು ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ. ಅಲ್ಲಿ 10 ಜನ ನಾಮ ನಿರ್ದೇಶನ ಸದಸ್ಯರು ಇದ್ದಾರೆ. ಅಲ್ಲಿ 10 ನಾಮನಿರ್ದೇಶಕ ಸದಸ್ಯರು ಮತದಾನ ಮಾಡಿರುವ ಕಾರಣದಿಂದ ಗಾಯತ್ರಿ ಅವರು ಸೋಲು ಅನುಭವಿಸಬೇಕಾಯಿತು ಎಂದರು.

ನಾಮನಿರ್ದೇಶಕ ಸದಸ್ಯರು ಮತ ಚಲಾವಣೆ ಮಾಡಿರುವ ವಿರುದ್ಧ ನ್ಯಾಯಾಲಯಕ್ಕೆ ಮೊರೆ ಹೋಗುತ್ತಿರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಕೇವಲ ಬೆಂಗಳೂರಿನಲ್ಲಿ ನಾಮನಿರ್ದೇಶನ ಸದಸ್ಯರು ಮತದಾನ ಮಾಡಬೇಕು ಎಂದು ಆದೇಶಿಸಲಾಗಿತ್ತು. ಆದರೆ ಅಲ್ಲಿ ಅವರಿಗೆ ಮತದಾನ ಮಾಡಿರುವ ಕುರಿತು ನ್ಯಾಯಾಲಯಕ್ಕೆ ಹೋಗುವ ಬಗ್ಗೆ ಚರ್ಚೆ ಮಾಡುತ್ತೇವೆ. ಈಗಾಗಲೇ ನ್ಯಾಯವಾದಿಗಳನ್ನು ಸಂಪರ್ಕಿಸುವಂತೆ ಗಾಯತ್ರಿ ಅವರಿಗೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

Join Whatsapp