ವಯನಾಡು: ಸಂತ್ರಸ್ತರಿಗೆ ಕಾಂಗ್ರೆಸ್ ಪಕ್ಷ 100 ಮನೆಗಳನ್ನು ನಿರ್ಮಿಸಿಕೊಡಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಭೂಕುಸಿತ ಸಂಭವಿಸಿದ ವಯನಾಡಿನ ಗ್ರಾಮಗಳಿಗೆ ನಿನ್ನೆ ಭೇಟಿ ನೀಡಿದ್ದರು. ಭೂಕುಸಿತದಿಂದ ಉಂಟಾದ ವಿನಾಶದ ವ್ಯಾಪ್ತಿಯನ್ನು ವೀಕ್ಷಿಸಿದ ಅವರು ಇದನ್ನು ‘ರಾಷ್ಟ್ರೀಯ ವಿಪತ್ತು‘ ಎಂದು ಕರೆದರು. ಹಾಗೇ ತುರ್ತು ಸಮಗ್ರ ಕ್ರಿಯಾ ಯೋಜನೆ ರೂಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಅಲ್ಲದೆ ಸಂತ್ರಸ್ತರಿಗೆ ಕಾಂಗ್ರೆಸ್ ಪಕ್ಷ 100 ಮನೆಗಳನ್ನು ನಿರ್ಮಿಸಿಕೊಡಲಿದೆ ಎಂದು ಭರವಸೆ ನೀಡಿದ್ದಾರೆ.