ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದೆ: ಮಲ್ಲಿಕಾರ್ಜುನ್ ಖರ್ಗೆ

Prasthutha|

ಕಲಬುರ್ಗಿ: ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.

- Advertisement -


ಕಲಬುರ್ಗಿಯಲ್ಲಿ ಮಾತನಾಡಿದ ಖರ್ಗೆ, ಬಿಜೆಪಿಯ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಛತ್ತೀಸ್ ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ತಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿವೆ ಮತ್ತು ಅಲ್ಲಿನ ಜನರು ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲ ಎಂದು ಹೇಳಿದರು.


ಐದು ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ನ ಸಿದ್ಧತೆಗಳು ಉತ್ತಮವಾಗಿ ನಡೆಯುತ್ತಿವೆ. ನಾವು ಎಲ್ಲಾ ರಾಜ್ಯಗಳಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಮುಖ್ಯವಾಗಿ ಹಣದುಬ್ಬರ ಮತ್ತು ನಿರುದ್ಯೋಗದಿಂದಾಗಿ ಬಿಜೆಪಿಗೆ ಆಡಳಿತ ವಿರೋಧಿಯಾಗಿದೆ” ಎಂದು ಖರ್ಗೆ ತಿಳಿಸಿದರು.

Join Whatsapp