ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಅವಕಾಶ ಸಿಗಲಿದೆ: ಸಚಿನ್ ಪೈಲಟ್

Prasthutha|

ಜೈಪುರ: ರಾಜಸ್ಥಾನದಲ್ಲಿ ನಮ್ಮ ಪಕ್ಷಕ್ಕೆ ಮತ್ತೊಂದು ಅವಕಾಶ ಸಿಗಲಿದೆ. ಈ ಬಾರಿ ಪರ್ಯಾಯ ಸರ್ಕಾರಗಳ ಪ್ರವೃತ್ತಿಯನ್ನು ಬದಲಾಯಿಸುವತ್ತ ಜನರ ಚಿತ್ತವಿದೆ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಅವಕಾಶ ಸಿಗುತ್ತದೆ ಎಂಬ ವಿಶ್ವಾಸವಿದೆ. ಸರ್ಕಾರ ರಚಿಸಲು ಬೇಕಾದ ಸಂಖ್ಯಾಬಲವನ್ನು ನಾವು ಪಡೆಯುತ್ತೇವೆ. ರಾಜ್ಯದ ಜನ ಬದ್ಧತೆ ಉಳಿಸಿಕೊಳ್ಳುವವರಿಗೆ ಮತ ಹಾಕುತ್ತಾರೆ ಎಂಬ ನಂಬಿಕೆ ಇದೆ’ ಎಂದು ತಿಳಿಸಿದ್ದಾರೆ.
ನನ್ನ ಮತ್ತು ಅಶೋಕ್ ಗೆಹಲೋತ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವು ಪಕ್ಷಕ್ಕಾಗಿ ಒಟ್ಟಾಗಿ ಕೆಲಸ ಮಾಡಿದ್ದೇವೆ. ಎರಡು –ಮೂರು ಜನರಿಂದ ಇದು ಸಾಧ್ಯ ಎಂದು ಹೇಳುತ್ತಿಲ್ಲ. ಬದಲಾಗಿ ಇಡೀ ರಾಜಸ್ಥಾನದ ಕಾಂಗ್ರೆಸ್ ಘಟಕವು ಒಗ್ಗೂಡಿ ಶ್ರಮಿಸಿದೆ ಎಂದು ಸಚಿನ್ ಪೈಲಟ್ ಹೇಳಿದ್ದಾರೆ.

Join Whatsapp