Home ಟಾಪ್ ಸುದ್ದಿಗಳು ಯಾವ ಕಾಲಕ್ಕೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಪ್ರಲ್ಹಾದ ಜೋಶಿ

ಯಾವ ಕಾಲಕ್ಕೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಾವೆಂದೂ ಅಧಿಕಾರಕ್ಕೆ ಬರೋದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಮನವರಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಜೋಶಿ, ದೇಶದಲ್ಲಿ ರಾಹುಲ್ ಗಾಂಧಿ ನಾಯಕತ್ವದಲ್ಲಿ ತಾವು ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂಬ ಸತ್ಯ ಕಾಂಗ್ರೆಸ್ಸಿಗರಿಗೆ ಗೊತ್ತಾಗಿದೆ. ಹಾಗಾಗಿ ಶತಾಯ-ಗತಾಯ ಕೇಂದ್ರ ಸರ್ಕಾರ ವಿರುದ್ಧ ಇಲ್ಲ ಸಲ್ಲದ ಮಾತಾಡುತ್ತಾರೆ ಅಷ್ಟೇ ಎಂದು ಹೇಳಿದರು.

ಭಾರತದಲ್ಲಿ ಯಾವುದೇ ಕಾಲಕ್ಕೂ ಬಿಜೆಪಿಯೇ ಬಲಿಷ್ಠವಾಗುತ್ತದೆ. ಸದ್ಯ ಮೋದಿ ನಾಯಕತ್ವದಲ್ಲಿ ಪ್ರಬಲವಾಗಿದೆ. ಕೆಲವು ವರ್ಷಗಳ ನಂತರ ಮತ್ಯಾರೋ ಪ್ರಬಲ ನೇತಾರರು ಮುಂಚೂಣಿಗೆ ಬರುತ್ತಾರೆ. ಕಾಂಗ್ರೆಸ್ ಅಧಿಕಾರದ ನಿರೀಕ್ಷೆಯಲ್ಲೇ ಕಾಲ ಕಳೆಯಬೇಕಾಗುತ್ತದೆ ಎಂದು ಸಚಿವ ಜೋಶಿ ಹೇಳಿದರು.

Join Whatsapp
Exit mobile version