ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ದಿಗ್ವಿಜಯ್ ಸಿಂಗ್ ಅಧ್ಯಕ್ಷೀಯ ಚುನಾವಣೆ ರೇಸ್ ನಿಂದ ಹಿಂದೆ ಸರಿದಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದಿಗ್ವಿಜಯ್ ಸಿಂಗ್, ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ನನ್ನ ಜೀವನದ ಉದ್ದಕ್ಕೂ ಕಾಂಗ್ರೆಸ್ ಗೆ ದುಡಿದಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ನನ್ನ ನಾಯಕ ಮತ್ತು ನನ್ನ ಹಿರಿಯ, ಆದ್ದರಿಂದ ನಾನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ. ಬದಲಿಗೆ ನಾನು ಮಲ್ಲಿಕಾರ್ಜುನ ಖರ್ಗೆ ಅವರ ಪರ ನಿಲ್ಲುತ್ತೇನೆ ಎಂದು ತಿಳಿಸಿದ್ದಾರೆ.