ಬಿಜೆಪಿ ಎಲ್ಲಿ ದ್ವೇಷದ ಮಾರುಕಟ್ಟೆಯನ್ನು ತೆರೆಯುತ್ತದೆಯೋ ಅಲ್ಲಿ ಕಾಂಗ್ರೆಸ್ ಪ್ರೀತಿಯ ಅಂಗಡಿ ತೆರೆಯುತ್ತದೆ: ರಾಹುಲ್ ಗಾಂಧಿ

Prasthutha|

ಪಾಕುರ್: ಬಿಜೆಪಿ ಎಲ್ಲಿ ದ್ವೇಷದ ಮಾರುಕಟ್ಟೆಯನ್ನು ತೆರೆಯುತ್ತದೆಯೋ ಅಲ್ಲಿ ಕಾಂಗ್ರೆಸ್ ಪ್ರೀತಿಯ ಅಂಗಡಿ ತೆರೆಯುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಶುಕ್ರವಾರ ಜಾರ್ಖಂಡ್ ಪ್ರವೇಶಿಸಿದೆ. ಜಾರ್ಖಂಡ್ ಗೆ ಯಾತ್ರೆ ಪ್ರವೇಶ ಮಾಡುತ್ತಿದ್ದಂತೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಹರಿಹಾಯ್ದರು.
ಭಾರತದಲ್ಲಿ ಕೋಟ್ಯಂತರ ಜನರಿಗೆ ‘ಅನ್ಯಾಯ’ವಾಗುತ್ತಿದೆ. ಇಂದಿನ ಭಾರತದಲ್ಲಿ, ಯುವಕರು ಉದ್ಯೋಗವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ನರೇಂದ್ರ ಮೋದಿ ಜಿ ನೋಟು ಅಮಾನ್ಯೀಕರಣ ಮತ್ತು ಜಿಎಸ್ಟಿಯನ್ನು ಜಾರಿಗೆ ತರುವ ಮೂಲಕ ಸಣ್ಣ ಉದ್ಯಮಿಗಳನ್ನು ನಾಶಪಡಿಸಿದ್ದಾರೆ. ಅದಕ್ಕಾಗಿಯೇ ನಾವು ಆರ್ಥಿಕ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ನಿಮ್ಮೊಂದಿಗೆ ಮಾತನಾಡಲು ಈ ಯಾತ್ರೆಯನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.

ಬಿಜೆಪಿ ಎಲ್ಲಿ ದ್ವೇಷದ ಮಾರುಕಟ್ಟೆಯನ್ನು ತೆರೆಯುತ್ತದೆಯೋ ಅಲ್ಲಿ ಕಾಂಗ್ರೆಸ್ ಪ್ರೀತಿಯ ಅಂಗಡಿ ತೆರೆಯುತ್ತದೆ ಎಂದು ರಾಹುಲ್ ಹೇಳಿದರು. ನ್ಯಾಯಕ್ಕಾಗಿ ಈ ಹೋರಾಟವು ಸಾರ್ವಜನಿಕ ಸಹಭಾಗಿತ್ವವನ್ನು ಒಳಗೊಂಡಿದೆ. ನಿಮ್ಮ ಬೆಂಬಲವೇ ನಮ್ಮ ಶಕ್ತಿ. ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ನಿಮ್ಮ ಶಕ್ತಿಯನ್ನು ನೀಡಿದ್ದಕ್ಕಾಗಿ ಧನ್ಯವಾದಗಳು ಎಂದು ಅವರು ಇದೇ ವೇಳೆ ಜಾರ್ಜಂಡ್ ಜನತೆಯನ್ನು ಉದ್ದೇಶಿಸಿ ಹೇಳಿದರು.



Join Whatsapp