ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬೊಮ್ಮಾಯಿ

Prasthutha|

ಬೆಂಗಳೂರು: ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

- Advertisement -

ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ.‌ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದ ಮೇಲೆ ತಮ್ಮ ತತ್ವ ಸಿದ್ದಾಂತ ಗಾಳಿಗೆ ತೂರಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

ಅನ್ಯಾಯಕ್ಕೆ ಸಿದ್ದರಾಮಯ್ಯ ಕಾರಣ
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಬರಗಾಲ ಬಿದ್ದಿದೆ ಬರ ಪರಿಹಾರ ನೀಡಿಲ್ಲ. ಯಾವ ನೈತಿಕತೆ ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ‌ ಎಂದರು.



Join Whatsapp