Home ಟಾಪ್ ಸುದ್ದಿಗಳು ರಾಹುಲ್ ಪಾದಯಾತ್ರೆ ವ್ಯಾಪ್ತಿಗೆ ಒಳಪಡದ ರಾಜ್ಯಗಳಲ್ಲಿ ಕಾಂಗ್ರೆಸ್ ಯಾತ್ರೆ ನಡೆಸಲಿದೆ: ಜೈರಾಮ್ ರಮೇಶ್

ರಾಹುಲ್ ಪಾದಯಾತ್ರೆ ವ್ಯಾಪ್ತಿಗೆ ಒಳಪಡದ ರಾಜ್ಯಗಳಲ್ಲಿ ಕಾಂಗ್ರೆಸ್ ಯಾತ್ರೆ ನಡೆಸಲಿದೆ: ಜೈರಾಮ್ ರಮೇಶ್

ಹೈದರಾಬಾದ್ : ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಸಂಚರಿಸಲು ಸಾಧ್ಯವಾಗದ ರಾಜ್ಯಗಳಲ್ಲಿ ಪ್ರತ್ಯೇಕವಾಗಿ ಯಾತ್ರೆ ನಡೆಸಲು ಕಾಂಗ್ರೆಸ್ ಮುಂದಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಮಂಗಳವಾರ ಹೈದರಾಬಾದ್ ಪ್ರವೇಶಿಸಿದ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ರಮೇಶ್, ಯಾತ್ರೆಗಾಗಿ ಗೊತ್ತುಪಡಿಸಿದ ಮಾರ್ಗ ಹೊರತುಪಡಿಸಿ, ಇತರ ರಾಜ್ಯಗಳಿಗೆ ಯಾತ್ರೆ ತೆರಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಲ್ಲಿ ಪ್ರತ್ಯೇಕವಾಗಿ ಯಾತ್ರೆ ನಡೆಸಿ ಜನರನ್ನು ಸಂಘಟಿಸಲು ಉದ್ದೇಶಿಸಲಾಗಿದೆ. ಈ ಮೂಲಕ ಯಾತ್ರೆಯ ಆಶಯವನ್ನು ಎಲ್ಲ ರಾಜ್ಯಗಳ ಜನರಿಗೂ ತಲುಪಿಸುವುದು ಕಾಂಗ್ರೆಸ್ ನ ಉದ್ದೇಶವಾಗಿದೆ ಎಂದು ತಿಳಿಸಿದರು.

ಯಾತ್ರೆ ಈಗಾಗಲೇ 55 ದಿನ ಪೂರೈಸಿದ್ದು, ಹೈದರಾಬಾದ್ ಮೂಲಕ ಯಾತ್ರೆ ಸಾಗಿದೆ.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 12 ರಾಜ್ಯಗಳ ಮೂಲಕ ಭಾರತ್ ಜೋಡೊ ಯಾತ್ರೆ ಸಾಗುತ್ತಿದೆ.

Join Whatsapp
Exit mobile version