ಉಪಚುನಾವಣೆ | ಎಲ್ಲ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ: ಝಮೀರ್ ಅಹ್ಮದ್

Prasthutha|

ಹುಬ್ಬಳ್ಳಿ: ಉಪ ಚುನಾವಣೆ ನಡೆಯುವ ಎಲ್ಲ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

- Advertisement -


ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ವಿಧಾನಸಭೆಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಕೇಳಿರುವುದು ಸತ್ಯ, ಆದರೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ದರಾಗಿರುವುದಾಗಿ ಹೇಳಿ ಕಾಂಗ್ರೆಸ್ ಯಾವತ್ತಿಗೂ ಹೈಕಮಾಂಡ್ ಆಧಾರಿತ ಪಕ್ಷ, ಅದು ಹಾಕಿದ ಗೆರೆಯನ್ನು ಯಾರೂ ದಾಟುವುದಿಲ್ಲ ಎಂದು ಹೇಳಿದರು.


ಉಪ ಚುನಾವಣೆ ನಡೆಯುವ ಎಲ್ಲ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸ ಅವರು ವ್ಯಕ್ತಪಡಿಸಿದರು.

- Advertisement -


ಚನ್ನಪಟ್ಟಣ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯೇ ಗೆಲ್ಲೋದು ಅಂತ ಹೆಚ್ ಡಿ ಕುಮಾರಸ್ವಾಮಿ ಹೇಳುತ್ತಿದ್ದಾರೆ, ಆದರೆ ಮಾಧ್ಯಮ ಪ್ರತಿನಿಧಿಗಳು ಬರೆದಿಟ್ಟುಕೊಳ್ಳಿ, ಅಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕನಿಷ್ಠ ಮೂವತ್ತು ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.



Join Whatsapp