Home ಟಾಪ್ ಸುದ್ದಿಗಳು ಗೃಹ ಸಚಿವ ಆರಗ ಜ್ಞಾನೇಂದ್ರರವರ ತವರೂರಿನ ಪಟ್ಟಣ ಪಂಚಾಯತ್ ನಲ್ಲಿ ಕಾಂಗ್ರೆಸ್ ಜಯಭೇರಿ

ಗೃಹ ಸಚಿವ ಆರಗ ಜ್ಞಾನೇಂದ್ರರವರ ತವರೂರಿನ ಪಟ್ಟಣ ಪಂಚಾಯತ್ ನಲ್ಲಿ ಕಾಂಗ್ರೆಸ್ ಜಯಭೇರಿ

►ನೂತನ ಅಧ್ಯಕ್ಷೆಯಾಗಿ ಶಬನಂ ಆಯ್ಕೆ

ತೀರ್ಥಹಳ್ಳಿ: ಗೃಹ ಸಚಿವ ಆರಗ ಜ್ಞಾನೇಂದ್ರರವರ ತವರೂರಾದ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಇಂದು ನಡೆದಿದ್ದು, ಕಾಂಗ್ರೆಸ್‌ ನ ಅಭ್ಯರ್ಥಿಗಳು ಜಯಭೇರಿಯನ್ನು ಬಾರಿಸಿದ್ದಾರೆ.

ಅಧ್ಯಕ್ಷರಾಗಿ ಶಬನಂ ಹಾಗೂ ಉಪಾಧ್ಯಕ್ಷರಾಗಿ ಜಯಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಆಪರೇಷನ್ ಕಮಲದ ಬಗ್ಗೆ ತೀರ್ಥಹಳ್ಳಿಯಲ್ಲಿ ಬಾರಿ ಚರ್ಚೆ ನಡೆದಿದ್ದು, ಈ ಬಗ್ಗೆ ಬಿಜೆಪಿ ಮುಖಂಡ ಸಂದೇಶ್ ಜವಳಿ ಮಾತನಾಡಿ, ನಾವು ಆಪರೇಷನ್ ಮಾಡುವುದಿಲ್ಲ. ಈ ಬಾರಿ ಅವರಿಗೆ ಜನರೇ ಅವಕಾಶ ನೀಡಿದ್ದಾರೆ ಕಾದು ನೋಡೋಣ ಎಂದು ಅವರು  ಹೇಳಿದ್ದರು.

ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಶಬನಂ ಹಾಗೂ ಜಯಪ್ರಕಾಶ್ ಶೆಟ್ಟಿ ಹಾಗೂ ಬಿಜೆಪಿಯಿಂದ ಜ್ಯೋತಿ ಮೋಹನ್ ಮತ್ತು ರವೀಶ್ ನಾಮಪತ್ರ ಸಲ್ಲಿಸಿದ್ದರು.

Join Whatsapp
Exit mobile version