ಪ್ರತಿಭಟನೆಯ ವೇಳೆ ಮಹಿಳಾ ಸಿಬ್ಬಂದಿಯ ಮುಖಕ್ಕೆ ಉಗಿದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ !

Prasthutha|

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಇಡಿ ವಿಚಾರಣೆಗೆ ಒಳಪಡಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟಿಸುತ್ತಿದ್ದಾರೆ. ಅಲ್ಲದೇ ಇಂದು ನವದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪೊಲೀಸ್ ಸಿಬ್ಬಂದಿಯ ಮುಖಕ್ಕೆ ಉಗಿದಿರುವ ವೀಡಿಯೋ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ.

- Advertisement -

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ಉಗುಳಿದ್ದಾರೆ. ಪ್ರತಿಭಟನೆಯ ವೇಳೆ ಪೊಲೀಸರು ಬಂಧಿಸಿದ್ದಕ್ಕಾಗಿ ಆಕ್ರೋಶಗೊಂಡ ನೆಟ್ಟಾ ಡಿಸೋಜ, ಪೊಲೀಸ್ ಮೇಲೆಯೇ ಉಗುಳಿದ್ದಾರೆ.

ಕಳೆದ ವಾರ ಪ್ರತಿಭಟನೆಯ ವೇಳೆ ಕಾಂಗ್ರೆಸ್ ಮಹಿಳಾ ನಾಯಕಿ ರೇಣುಕಾ ಚೌಧರಿ, ಪಿಎಸ್‌ಐ ಅಧಿಕಾರಿಯ ಕೊರಳಪಟ್ಟಿ ಹಿಡಿದು ಎಳೆದಾಡಿರುವ ಘಟನೆಯೂ ನಡೆದಿತ್ತು.



Join Whatsapp