ಪುತ್ತೂರು : ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಿಂದುತ್ವ ಸಂಘಟನೆ ಕಾರ್ಯಕರ್ತನಿಂದ ಹಲ್ಲೆ

Prasthutha|

ಪುತ್ತೂರು : ಚುನಾವಣೆಗೂ ಮೊದಲೇ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ.

- Advertisement -

ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಎಂಬಾತ ಚುನಾವಣೆಗೂ ಮೊದಲೇ ಬಿಜೆಪಿ ತೊರೆದು ಕಾಂಗ್ರೆಸ್ ಬೆಂಬಲಿಸಿದ್ದರು. ಅಲ್ಲದೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಅಶೋಕ್ ರೈ ಪರ ಪ್ರಚಾರ ನಡೆಸಿದ್ದರು. ಪುತ್ತೂರು ತಾಲೂಕಿನ ಪುರುಷಕಟ್ಟೆಯಲ್ಲಿ ಪ್ರವೀಣ್ ಆಚಾರ್ಯನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತ ಪ್ರವೀಣ್ ಎಂಬಾತ ಹಲ್ಲೆ ನಡೆಸಿದ್ದಾನೆ. ಹಲ್ಲೆಗೀಡಾದ ಪ್ರವೀಣ್​ಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.