ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಹಲ್ಲೆ

Prasthutha|

ಚಿಕ್ಕಮಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಚಿಕ್ಕಮಗಳೂರಿನ ರಾವೂರು ಗ್ರಾಮದಲ್ಲಿ ನಡೆದಿದೆ.

- Advertisement -

ರಾವೂರು ಗ್ರಾಮದ ಬಿಜೆಪಿ ಕಾರ್ಯಕರ್ತ ಶಿವು ಹಲ್ಲೆಗೊಳಗಾದವರು.  

ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಹಿಂಬಾಲಕರಿಂದ ಈ ಹಲ್ಲೆ ನಡೆದಿದೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.

- Advertisement -

N.R ಪುರ ತಾಲೂಕಿನ ನಾಗಲಾಪುರ ಸಮೀಪದ ರಾವೂರು ಗ್ರಾಮದ ಬಳಿ ಹಲ್ಲೆ ನಡೆದಿದ್ದು, ಮಾರಣಾಂತಿಕವಾಗಿ ಗಾಯಗೊಂಡ ಶಿವು ಅವರನ್ನು N.R ಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 ತಿಂಗಳ ಹಿಂದೆಯಷ್ಟೇ ಶಿವು ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿ ಸೇರಿದ ವಿಚಾರವಾಗಿ ಶಿವು ಜೊತೆ ಶಾಸಕರ ಹಿಂಬಾಲಕರು ಗಲಾಟೆ ಮಾಡಿದ್ದರು ಎಂದು ತಿಳಿದುಬಂದಿದೆ.

ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ N.R ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp