ಕಾಂಗ್ರೆಸ್ ಕಾರ್ಯಕರ್ತನನ್ನು ಕೊಲೆಗೈದು ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು

Prasthutha|

ಗದಗ: ಕಾಂಗ್ರೆಸ್ ಕಾರ್ಯಕರ್ತರೊಬ್ಬರನ್ನು ಕೊಲೆಗೈದು ಮರಕ್ಕೆ ನೇತುಹಾಕಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ನಡೆದಿದೆ.

- Advertisement -

ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಕೊಲೆಗೀಡಾದ ವ್ಯಕ್ತಿ.

ಕೊಲೆಗೂ ಮುನ್ನ ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿರುವ ದುಷ್ಕರ್ಮಿಗಳು, ಕಣ್ಣಿಗೆ ಕಾರದಪುಡಿ ಎಸೆದು ಹಲ್ಲೆ ಮಾಡಿದ್ದಾರೆ. ನಂತರ ಶವ ತೂಗು ಹಾಕಿ ವಿಕೃತಿ ಮೆರೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



Join Whatsapp