ಸುಲ್ತಾನ್ ಪುರ: ಪ್ರಧಾನಿ ನರೇಂದ್ರ ಮೋದಿಯವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಕಾಂಗ್ರೆಸ್ ಕಾರ್ಯಕರ್ತೆ ರೀತಾ ಯಾದವ್ ಅವರಿಗೆ ಸೋಮವಾರ ಸಂಜೆ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಗುಂಡು ಕಾಲಿಗೆ ತಗುಲಿದ್ದು, ಅವರನ್ನು ಸಿಎಚ್ ಸಿ ಲಾಂಭುವಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಅವರ ಪರಿಸ್ಥಿತಿ ಚಿಂತಾಜನಕವಾಗಿರುವುದರಿಂದ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬಳಿಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿ ಆಸ್ಪತ್ರೆಗೆ ಆಗಮಿಸಿ
2021ರ ನವೆಂಬರ್ ತಿಂಗಳಿನಲ್ಲಿ ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇ ಉದ್ಘಾಟನೆಗೆ ಪ್ರಧಾನಿ ಮೋದಿ ಉತ್ತರ ಪ್ರದೇಶಕ್ಕೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ಯೋಗಿ ಮುರ್ದಾಬಾದ್ ಎಂಬ ಘೋಷಣೆ ಕೂಗಿದ್ದ ರೀತಾ ಯಾದವ್ ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದರು.
ಅವರು ಸೋಮವಾರ ಸಂಜೆ 6.30ರ ಸಮಯದಲ್ಲಿ ಪಕ್ಷದ ಕಚೇರಿಯಿಂದ ಮನೆಗೆ ತೆರಳಿದ್ದ ವೇಳೆ ಲಕ್ನೋ-ವಾರಣಾಸಿ ಚತುಷ್ಪತ ಹೆದ್ದಾರಿ ಸುಲ್ತಾನ್ಪುರದ ಬಳಿ ದುಷ್ಕರ್ಮಿಗಳಿಂದ ರೀತಾ ಗುಂಡಿನ ದಾಳಿಗೆ ಒಳಗಾಗಿದ್ದಾರೆ.
ರೀತಾ ಯಾದವ್ ಸಮಾಜವಾದಿ ಪಕ್ಷದಲ್ಲಿದ್ದ ಅವರು ನಂತರ ಕಾಂಗ್ರೆಸ್ ಸೇರಿದ್ದರು.