ಪೂಂಜಾಲಕಟ್ಟೆ: ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸಂಭವಿಸಿದ್ದು, ಇದು ಕೊಲೆಯಾಗಿರಬೇಕೆಂಬ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿದೆ. ಈ ಬಗ್ಗೆ ತನಿಖೆಯಾಗಬೇಕೆಂದು ಆಗ್ರಹಿಸಲಾಗಿದೆ.
ಮೃತ ಯುವಕ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ವಿರುದ್ಧ ಪೋಸ್ಟ್‌ಗಳನ್ನು ಹಾಕುತ್ತಿದ್ದರು.ಮಾಹಿತಿ ಹಕ್ಕು (ಆರ್‌ಟಿಐ)ಮೂಲಕ ಮಾಹಿತಿ ಪಡೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿದ್ದರು.
ಪದ್ಮನಾಭ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾಗಿದ್ದರು. ಇತ್ತೀಚೆಗೆ ಅವರಯ ವಂಚನೆ ಆರೋಪ ಎದುರಿಸುತ್ತಿದ್ದರು.
ಯುವಕನೋರ್ವನಿಗೆ ಸರಕಾರಿ ಉದ್ಯೋಗ ದೊರಕಿಸಿಕೊಡುವುದಾಗಿ 1.50 ಲಕ್ಷ ರೂ. ಹಣವನ್ನು ಪಡೆದುಕೊಂಡು ವಂಚಿಸಿದ್ದ ಎಂದು ಯುವಕ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ವಿಚಾರಣೆಗೆ ಹಾಜರಾಗುವುದಾಗಿ ಪೊಲೀಸರ ಬಳಿ ಹೇಳಿಕೊಂಡಿದ್ದ ಪದ್ಮನಾಭ ಸಾಮಂತ ಕಳೆದ ಮೂರು ದಿನಗಳಿಂದ ಠಾಣೆಗೆ ಹಾಜರಾಗಿರಲಿಲ್ಲ. ದೂರವಾಣಿ ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪದ್ಮನಾಭ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತಪಟ್ಟು ಕೆಲವು ದಿನಗಳು ಕಳೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೊಲೀಸ್ ಪ್ರಾಥಮಿಕ ಮಾಹಿತಿ ಪ್ರಕಾರ ಆತ್ಮಹತ್ಯೆ ಎನ್ನಲಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಕೊಲೆ ಶಂಕೆ ವ್ಯಕ್ತವಾಗುತ್ತಿದೆ. ನಿಜಾಂಶವೇನು ಎನ್ನುವುದು ಮರಣೋತ್ತರ ಪರೀಕ್ಷೆಯ ಬಳಿಕ ತಿಳಿದು ಬರಬೇಕಾಗಿದೆ.