ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಮೊಟ್ಟೆ ಒಡೆದು, ಸೆಗಣಿ ಹಾಕಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು

Prasthutha|

ಹೊಸಪೇಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದ್ದು, ಹೊಸಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಮೊಟ್ಟೆ ಎಸೆದು, ಸೆಗಣಿ ಹಾಕಿದ ಘಟನೆ ನಡೆದಿದೆ.

- Advertisement -

ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು.

ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಸೇರಿದ ನೂರಾರು ಕಾರ್ಯಕರ್ತರು, ಸಂಸದ ಪ್ರತಾಪ ಸಿಂಹ, ಶಾಸಕ ಕೆ.ಎಸ್. ಈಶ್ವರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಸಿ.ಟಿ. ರವಿ ಭಾವಚಿತ್ರವಿದ್ದ ಪೋಸ್ಟರ್ ನೆಲದ ಮೇಲೆ ಹಾಕಿ, ಕಾಲಿನಲ್ಲಿ ತುಳಿದು ಅದರ ಮೇಲೆ ಮೊಟ್ಟೆಗಳನ್ನು ಒಡೆದು, ಸಗಣಿ ಹಾಕಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿ ವರೆಗೆ ಜಾಥಾ ನಡೆಸಿದ ಕಾರ್ಯಕರ್ತರು, ಅನಂತರ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಎನ್ ಮಹೇಶಬಾಬು ಅವರಿಗೆ ಸಲ್ಲಿಸಿದರು.

Join Whatsapp