Home ಟಾಪ್ ಸುದ್ದಿಗಳು ಬಿಜೆಪಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ: ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬಿಜೆಪಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ: ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಅನುದಾನ ತಾರತಮ್ಯದಲ್ಲಿ ನಮಗೆ ಅನ್ಯಾಯ ಆಗುತ್ತಿದೆ ಎಂದು ಇಂದು ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ಬೃಹತ್ ಹೋರಾಟವನ್ನೇ ನಡೆಸಿದೆ. ಇತ್ತ ನಗರದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಕೂಡ ಪ್ರತಿಭಟನೆ ಮಾಡಿದರೆ, ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ ಮಾಡಿದೆ.


ಬ್ಯಾರಿಕೇಡ್ ಅಳವಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ಪ್ರವೇಶಿಸದಂತೆ ತಡೆಯಲಾಗಿದ್ದು, ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ವಿರೋಧ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರತ್ತ ನುಗ್ಗಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದು ಈ ವೇಳೆ ಪೊಲೀಸರು ತಡೆದರು.

Join Whatsapp
Exit mobile version