ಮಂಗಳೂರು: ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

Prasthutha|

►►ಸಿಎಂ ಬಸವರಾಜ ಬೊಮ್ಮಾಯಿ ಇದ್ದ ಹೊಟೇಲ್ ಗೆ ಮುತ್ತಿಗೆ

- Advertisement -

ಮಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಸಿಎಂ ಬೊಮ್ಮಾಯಿ ತಂಗ್ಗಿರುವ ಮಂಗಳೂರಿನ ಓಷಿಯನ್ ಪರ್ಲ್ ಹೊಟೇಲ್ ಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಇಂದು ಉಡುಪಿಯ ಖಾಸಗಿ ಲಾಡ್ಜೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಸಂತೋಷ್ ಪಾಟೀಲ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.



Join Whatsapp