ಇದು ಗೂಂಡಾರಾಜ್ಯ ಎಂದು ಕಾಂಗ್ರೆಸ್ ಕಾರ್ಯಕರ್ತರೇ ತೋರಿಸಿಕೊಟ್ಟಿದ್ದಾರೆ: ಅಶೋಕ್

Prasthutha|

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕರ್ತರು ಗನ್‌ ಇಟ್ಟುಕೊಂಡು ಓಡಾಡುತ್ತಿದ್ದಾರೆ. ಈ ಮೂಲಕ ತಮ್ಮದು ಗೂಂಡಾ ರಾಜ್ಯ ಎಂದು ತೋರಿಸಿಕೊಂಡಿದ್ದಾರೆ. ಇಂತಹ ಘಟನೆಯಿಂದ ಪೊಲೀಸ್‌ ಇಲಾಖೆ ಬದುಕಿದ್ದೂ ಸತ್ತಂತಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ ಕಿಡಿಗಾರಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಗನ್ ಇದ್ದವರು ಒಂದು ತಿಂಗಳು ಮುಂಚಿತವಾಗಿ ಗನ್‌ ವಾಪಸ್‌ ಕೊಡಬೇಕಾಗಿತ್ತದೆ. ಆದರೆ ತಮ್ಮ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸರ ಮೇಲೆ ಒತ್ತಡ ಹಾಕಿ ಗನ್‌ ಅನ್ನು ಜೇಬಿನಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದು ಕಾಂಗ್ರೆಸ್‌ ಕಾರ್ಯಕರ್ತರೇ ಮಾಡುತ್ತಿರುವ ರೌಡಿಸಂ. ಅಂತಹವರು ಮುಖ್ಯಮಂತ್ರಿಗಳಿಗೆ ಹಾರ ಹಾಕುವ ಮೂಲಕ ನಾವು ಕಾನೂನು ಪಾಲನೆ ಮಾಡಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಕಾಂಗ್ರೆಸ್ಸಿನ ಗೂಂಡಾ ರಾಜ್ಯ ಇದು ಎಂದರು.

- Advertisement -

ಇದು ಅತಿ ದೊಡ್ಡ ಭದ್ರತಾ ವೈಫಲ್ಯವಾಗಿದೆ. ಇನ್ನು ನಾಳೆಯ ದಿನಗಳಲ್ಲಿ ಯಾರಾದರೂ ಬಾಂಬ್‌ ಇಟ್ಟುಕೊಂಡು ಓಡಾಡಬಹುದು. ಇಂತಹ ಘಟನೆಯಿಂದ ಪೊಲೀಸ್‌ ಇಲಾಖೆ ಬದುಕಿದ್ದೂ ಸತ್ತಂತಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ನಾನು ಸದನದಲ್ಲೇ ಹೇಳಿದ್ದೆ. ಇದು ಕೂಡ ಒಂದು ನಿದರ್ಶನ. ಇದಕ್ಕೆ ಸರ್ಕಾರ ಏನು ಉತ್ತರ ಕೊಡಲಿದೆ ಎಂದು ಜನರು ನಿರೀಕ್ಷಿಸುತ್ತಿದ್ದಾರೆ. ಈ ಕುರಿತು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲಿದೆ ಎಂದು ತಿಳಿಸಿದರು.



Join Whatsapp