ಸಿಎಂ ಬೊಮ್ಮಾಯಿ, ಆರಗ ಫೋಸ್ಟರ್’ಗೆ ಮೊಟ್ಟೆ ಎಸೆದ ಕಾಂಗ್ರೆಸ್ ಕಾರ್ಯಕರ್ತರು

Prasthutha|

ಮಂಡ್ಯ: ಕೊಡಗಿನಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಪೋಸ್ಟರ್ ಗೆ ಮೊಟ್ಟೆ ಎಸೆದಿದ್ದಾರೆ.

- Advertisement -


ಈ ಘಟನೆ ಮಂಡ್ಯದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿರುವುದನ್ನು ವಿರೋಧಿಸಿ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಾಂಗ್ರೆಸ್ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಕಾರ್ಯಕರ್ತರು ಬೊಮ್ಮಾಯಿ ಹಾಗೂ ಆರಗ ಜ್ಞಾನೇಂದ್ರ ಭಾವಚಿತ್ರಗಳಿರುವ ಇರುವ ಪೋಸ್ಟರ್ ಗೆ ಮೊಟ್ಟೆ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.

Join Whatsapp