ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು

Prasthutha|

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

- Advertisement -

ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಯ ಪ್ರತಿಭಟನೆ ನಡೆಸಿದ್ದು, ಪಟ್ಟಣದಲ್ಲಿರುವ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ‌. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ರಸ್ತೆ ಮಧ್ಯೆಯೇ ತಡೆದರು. ನೂರಾರು ಕಾಂಗ್ರೆಸ್ ಕಾರ್ಯಕರ್ತರ ವಶಕ್ಕೆ ಪಡೆಯಲಾಗಿದೆ.



Join Whatsapp