Home ಟಾಪ್ ಸುದ್ದಿಗಳು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ: ಯಾರಾಗಲಿದ್ದಾರೆ ಪಕ್ಷದ ನೂತನ ಅಧ್ಯಕ್ಷ?

ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ: ಯಾರಾಗಲಿದ್ದಾರೆ ಪಕ್ಷದ ನೂತನ ಅಧ್ಯಕ್ಷ?

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ –ಸಿಡಬ್ಲ್ಯುಸಿ ಸಭೆ ರಾಜಧಾನಿ ದೆಹಲಿಯಲ್ಲಿ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಆರಂಭಗೊಂಡಿದ್ದು, ಪಕ್ಷದ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲಾ ಪದಾಧಿಕಾರಿಗಳ ಹುದ್ದೆಯ ಬಗ್ಗೆ ತೀರ್ಮಾನವಾಗಲಿದೆ.
ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎ.ಕೆ.ಆ್ಯಂಟನಿ, ಕೆ.ಸಿ.ವೇಣುಗೋಪಾಲ್, ಗುಲಾಂ ನಬಿ ಆಜಾದ್, ಪ್ರಿಯಾಂಕಾ ಗಾಂಧಿ, ಎಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್, ಸೇರಿದಂತೆ ಹಲವು ಮುಖಂಡರು, ಪದಾಧಿಕಾರಿಗಳು ಪಾಲ್ಗೊಂಡಿದ್ದಾರೆ.


ಪ್ರಸ್ತುತ ರಾಜಕೀಯ ಬೆಳವಣಿಗೆ, ವಿವಿಧ ರಾಜ್ಯಗಳಲ್ಲಿನ ಪಕ್ಷಗಳ ಸ್ಥಿತಿಗತಿ, ವಿಧಾನಸಭೆ ಚುನಾವಣೆಗಳ ಕುರಿತು ಪ್ರಮುಖವಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರ ಹೆಸರು ಪ್ರಕಟಗೊಳ್ಳಲಿದೆ ಎನ್ನಲಾಗಿದೆ.

Join Whatsapp
Exit mobile version