34 ವರ್ಷದ ಹಿಂದಿನ ರೋಡ್ ರೇಝ್ ಪ್ರಕರಣ | ನವಜೋತ್ ಸಿಂಗ್ ಸಿಧು’ಗೆ 1 ವರ್ಷ ಜೈಲು

Prasthutha|

ನವದೆಹಲಿ: 1988 ರ ರೋಡ್ ರೇಝ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯದ ಈ ಆದೇಶದನ್ವಯ ನವಜೋತ್ ಸಿಧು ನ್ಯಾಯಾಲಯದ ಮುಂದೆ ಶರಣಾಗಬೇಕಾಗಿದೆ.

- Advertisement -

ಡಿಸೆಂಬರ್ 27, 1988 ರಂದು ಸಿಧು ಅವರು ಗುರ್ನಾಮ್ ಸಿಂಗ್ ಅವರ ತಲೆಗೆ ಹೊಡೆದ ಪರಿಣಾಮ ಅವರು ಸಾವನ್ನಪ್ಪಿದ್ದರು. ಈ ಬಗ್ಗೆ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪಾಟಿಯಾಲ ಸೆಷನ್ ಕೋರ್ಟ್ ನ ನ್ಯಾಯಾಧೀಶರು ಸೆಪ್ಟೆಂಬರ್ 22, 1999 ರಂದು ಸಿಧು ಮತ್ತು ಸಹಚರರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖಲಾಸೆಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು.

- Advertisement -

ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ 2006 ರಲ್ಲಿ ಸಿಧು ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಧು ಸುಪ್ರೀಮ್ ಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಮ್ ಕೋರ್ಟ್ ಸಿಧು ಅವರಿಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.



Join Whatsapp