ಸಲ್ಮಾನ್ ಖುರ್ಷಿದ್ ವಿರುದ್ಧ ಬಿಜೆಪಿ ದೂರು

Prasthutha|

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರು ಅಯೋಧ್ಯೆ ಕುರಿತು ಬರೆದ ನೂತನ ಪುಸ್ತಕ ಸಾಕಷ್ಟು ವಿವಾದಕ್ಕೆ ಸಿಲುಕಿದೆ. ಈ ಸಂಬಂಧ ದೆಹಲಿ ಮೂಲದ ವಕೀಲರೊಬ್ಬರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.

- Advertisement -

ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪುಸ್ತಕದಲ್ಲಿ ಹಿಂದುತ್ವವನ್ನು ಮೂಲಭೂತ ಇಸ್ಲಾಮಿಕ್ ಭಯೋತ್ಪಾದಕ ಗುಂಪುಗಳೊಂದಿಗೆ ಹೋಲಿಕೆ ಮಾಡಿದ್ದಾರೆ ಎಂದು ಆರೋಪಿಸಿ ಈ ದೂರು ನೀಡಲಾಗಿದೆ.

ಸಲ್ಮಾನ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಗೊಳಿಸಬೇಕು ಮತ್ತು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಹಿಂದೂಗಳ ಬಗ್ಗೆ ಗೌರವವಿದ್ದರೆ ತನ್ನ ನಿಲುವನ್ನು ಪ್ರಕಟಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

- Advertisement -

ಈ ಕುರಿತು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ “ ಕಾಂಗ್ರೆಸ್ ನ ಸಲ್ಮಾನ್ ಖುರ್ಷಿದ್ ತಮ್ಮ ನೂತನ ಪುಸ್ತಕದಲ್ಲಿ ಹಿಂದುತ್ವ ಮತ್ತು ಐಸಿಸ್ , ಬೋಕೊ ಹರಾಮ್ ನಂತಹ ಇಸ್ಲಾಮಿಕ್ ಮೂಲಭೂತ ಸಂಘಟನೆಗಳ ನಡುವೆ ಯಾವುದೇ ವ್ಯತ್ಯಾಸ ಕಾಣಿಸುವುದಿಲ್ಲ ಎಂದು ಉಲ್ಲೇಖಿಸಿದ್ದಾರೆ. ಕೇಸರಿ ಭಯೋತ್ಪಾದನೆ ಮತ್ತು ಇಸ್ಲಾಮಿಕ್ ಭಯೋತ್ಪಾದನೆ ಸಮಾನವಾದವು ಎಂದು ಬಿಂಬಿಸುವ ಮೂಲಕ ಮುಸ್ಲಿಮ್ ಮತಗಳ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಟೀಕಿಸಿದ್ದಾರೆ.

ಮಾತ್ರವಲ್ಲ ಈ ಪುಸ್ತಕವು ದೇಶದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆಯಿದೆ ಎಂದು ಬಿಜೆಪಿ ವಕ್ತಾದ ಗೌರವ್ ಭಾಟಿಯಾ ತಿಳಿಸಿದ್ದಾರೆ.

Join Whatsapp