‘ರಾಜ್ಯದ ಜನತೆ ಬಯಸುತ್ತಿರುವುದು ಸರ್ಕಾರದ ಬದಲಾವಣೆಯೇ ಹೊರತು ನಾಯಕತ್ವ ಬದಲಾವಣೆಯಲ್ಲ’: ಕಾಂಗ್ರೆಸ್

Prasthutha|

ಬೆಂಗಳೂರು: ಬಿಜೆಪಿಯ ದುರಾಡಳಿತದಿಂದ ಬೇಸತ್ತ ರಾಜ್ಯದ ಜನತೆ ಬಯಸುತ್ತಿರುವುದು “ನಾಯಕತ್ವ ಬದಲಾವಣೆ” ಅಲ್ಲ “ಸರ್ಕಾರದ ಬದಲಾವಣೆ” ಎಂದು ರಾಜ್ಯ ಕಾಂಗ್ರೆಸ್ ಘಟಕ ಹೇಳಿದೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ತಮ್ಮದು ವಿಫಲ ಸರ್ಕಾರ, ವಿಫಲ ಆಡಳಿತ, ವಿಫಲ ನಾಯಕತ್ವ ಎನ್ನುವುದನ್ನು ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡುವ ಮೂಲಕ ಒಪ್ಪಿಕೊಂಡಂತಾಗಿದೆ. ಅವರೇ ಹೇಳಿಕೊಳ್ಳುವಂತೆ ಸಮರ್ಥ ಆಡಳಿತವೇ ಆಗಿದ್ದಿದ್ದರೆ ಈ ‘ಪದಚ್ಯುತಿ’ ಮಾಡಿದ್ದೇಕೆ? ಎಂದು ಪ್ರಶ್ನೆಸಿದೆ.

- Advertisement -

ಬಿಜೆಪಿಯ ದುರಾಡಳಿತದಿಂದ ಬೇಸತ್ತ ರಾಜ್ಯದ ಜನತೆ ಬಯಸುತ್ತಿರುವುದು ‘ನಾಯಕತ್ವ ಬದಲಾವಣೆ’ ಅಲ್ಲ ‘ಸರ್ಕಾರದ ಬದಲಾವಣೆ’ ಬಿಜೆಪಿಗೆ ತಾಕತ್ತಿದ್ದರೆ, ನೈತಿಕತೆಯಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬರಲಿ, ರಾಜ್ಯವನ್ನು ಯಾರು ಆಳಬೇಕು ಎನ್ನುವುದನ್ನು ಜನರೇ ನಿರ್ಧರಿಸಲಿ ಎಂದು ಹೇಳಿದೆ.



Join Whatsapp