ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಬಂದ ಕೋರ್ಟ್ ತೀರ್ಪಿನ ಬಗ್ಗೆ ಮಾತನಾಡುವುದಿಲ್ಲ. ರಾಜಕೀಯವಾಗಿ ರಾಹುಲ್ ಮುಗಿಸಬೇಕೆಂಬ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಜನಪ್ರಿಯತೆಯನ್ನು ನೋಡಿ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಪಾದಯಾತ್ರೆ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿದರು.
ರಾಹುಲ್ ಗಾಂಧಿ ಬೆಂಬಲಿಸಿ ಬುಧವಾರ ಫ್ರೀಡಂಪಾರ್ಕ್ನಲ್ಲಿ ಮೌನ ಪ್ರತಿಭಟನೆ ಮಾಡಲಿದ್ದೇವೆ. ಸಿಎಂ ಸೇರಿ ಎಲ್ಲಾ ಶಾಸಕರು ಭಾಗಿಯಾಗಲಿದ್ದಾರೆ ಎಂದರು. ಎಲ್ಲ ವಿರೋಧ ಪಕ್ಷದವರು ರಾಹುಲ್ ಪರ ನಿಲ್ಲುತ್ತಿದ್ದೇವೆ ಎನ್ನುವ ಸಂದೇಶ ಕಳಿಸಬೇಕಿದೆ. ರಾಹುಲ್ ಕರ್ನಾಟಕದಲ್ಲಿ ಮಾಡಿದ್ದ ಭಾಷಣಕ್ಕೆ ಕೋರ್ಟ್ ತೀರ್ಪಿನ ಬಗ್ಗೆ ಮಾತಾಡುವುದಿಲ್ಲ ಎಂದರು.