ಸ್ಪೋಟಕವಿರಿಸಿ ಕಾಡುಪ್ರಾಣಿಗಳ ಹತ್ಯೆಗೆ ಸಂಚು| ಬಾಂಬ್ ನಿಷ್ಕ್ರಿಯ ದಳದಿಂದ ಕಾರ್ಯಾಚರಣೆ

Prasthutha: June 29, 2021

ಮಂಗಳೂರು : ಕಾಡು ಪ್ರಾಣಿಗಳ ಹತ್ಯೆಗೆ ಸಂಚು ರೂಪಿಸಿ ಕಚ್ಚಾ ಬಾಂಬ್​​​ಗೆ ಕೋಳಿ ಮಾಂಸ ಇರಿಸಿದ್ದ ಪ್ರಕರಣವೊಂದು ಮೂಡುಬಿದಿರೆ ತಾಲೂಕಿನ ಬಡಗಮಿಜಾರು ಎಂಬಲ್ಲಿ ನಡೆದಿದೆ.

ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಎರಡು ಸ್ಪೋಟಕ ಪತ್ತೆಯಾಗಿದ್ದು, ನ್ಯಾಯಾಲಯದ ಆದೇಶ ಅನುಸಾರ ಬಾಂಬ್ ನಿಷ್ಕ್ರಿಯ ದಳದ ಸಹಾಯದಿಂದ ನಾಶಗೊಳಿಸಲಾಗಿದೆ.

ಕೋಳಿ ಕರುಳು ಸುತ್ತಿ ಸ್ಪೋಟಕ ಇರಿಸಿ ಪ್ರಾಣಿ ವದೆಗೆ ಯತ್ನಿಸಲಾಗಿದ್ದು, ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಸ್ಪೋಟಕ ಬಳಕೆ ಕಾಯ್ದೆ ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಕೃತ್ಯ ಮಾಡಿದವರ ಬಗ್ಗೆ ಇನ್ನೂ ಮಾಹಿತಿ ಎನ್ನಲಾಗಿದೆ.

ಸ್ಪೋಟಕದಿಂದ ಸ್ಥಳೀಯರಲ್ಲಿ ಗೊಂದಲದ ಹಿನ್ನೆಲೆಯಲ್ಲಿ ಸ್ಥಳೀಯರು ನೀಡಿದ ಮಾಹಿತಿ ಆಧಾರದಲ್ಲಿ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ತಿಳಿಸಿದ್ದಾರೆ.

ವಿಡೀಯೋ ವೀಕ್ಷಿಸಿ …

https://youtu.be/-P_w5PlArTc

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ