ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಕಾನ್ಸ್‌ ಟೇಬಲ್ ಅರೆಸ್ಟ್

Prasthutha|

ರಾಯ್‍ ಪುರ: ಛತ್ತೀಸ್‍ ಗಢದ ರಾಜಧಾನಿ ರಾಯ್‍ ಪುರದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಕಾನ್ಸ್‌ ಟೇಬಲ್‌ನನ್ನು  ಪೊಲೀಸರು ಬಂಧಿಸಿದ್ದಾರೆ.

- Advertisement -

ಗುರುವಾರ ಮಧ್ಯರಾತ್ರಿ ಆರೋಪಿ ತನ್ನ ಕಾರಿನಲ್ಲಿ ಹಾಗೂ ಆಕೆಯ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಯುವತಿ ಹಾಗೂ ಆರೋಪಿ ಕಳೆದ ಕೆಲವು ತಿಂಗಳಿಂದ ಪರಿಚಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಯುವತಿ ತನ್ನ ಅಧ್ಯಯನಕ್ಕೆ ಸಂಬಂಧಿಸಿದಂತೆ ಸಹಾಯ ಕೇಳಿ ಕಾನ್ಸ್‌ ಟೇಬಲ್ ಬಳಿ ಹೋಗಿದ್ದಾಳೆ. ಈ ವೇಳೆ ಆತ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇಬ್ಬರು 2-3 ತಿಂಗಳಿನಿಂದ ಫೋನ್‍ ನಲ್ಲಿ ಸಂಪರ್ಕದಲ್ಲಿದ್ದರು. ಇಬ್ಬರು ಒಂದೇ ಪ್ರದೇಶದವರು ಎಂದು ಪೊಲೀಸರು ತಿಳಿಸಿದ್ದಾರೆ.



Join Whatsapp
Exit mobile version