ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ: ಕಾನ್ಸ್ ಟೇಬಲ್ ಗೆ ಜೀವಾವಧಿ ಶಿಕ್ಷೆ

Prasthutha|

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪಿ ಪೊಲೀಸ್ ಕಾನ್ಸ್ ಟೇಬಲ್ ಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

- Advertisement -

ದ.ಕ. ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿದ್ದ ಬಜ್ಪೆ ಸಿದ್ಧಾರ್ಥನಗರ ನಿವಾಸಿ ಪ್ರವೀಣ್ ಸಾಲ್ಯಾನ್ (35) ಶಿಕ್ಷೆಗೊಳಗಾದ ಆರೋಪಿ.

- Advertisement -

2015 ರಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ಫೇಸ್ಬುಕ್ ಮೂಲಕ ಪರಿಚಯ ಮಾಡಿಕೊಂಡ ಪ್ರವೀಣ್, ಪ್ರೀತಿಸಬೇಕೆಂದು ಒತ್ತಾಯಿಸಿ, ಅಶ್ಲೀಲ ಸಂಭಾಷಣೆ ನಡೆಸುತ್ತಿದ್ದ ಮತ್ತು ಬಾಲಕಿಯ ಜೊತೆಗೆ 1 ಲಕ್ಷ ರೂ. ಹಣ ಅಥವಾ ಚಿನ್ನ ನೀಡಬೇಕೆಂದು ಬೇಡಿಕೆಯಿರಿಸಿದ್ದ. ಇದರಿಂದ ಮನನೊಂದ ಬಾಲಕಿಯು ತನ್ನ ಮನೆಯ ಬೆಡ್ರೂಮ್ನಲ್ಲಿ ಆತ್ಮಹತ್ತ್ಯೆಗೆ ಶರಣಾಗಿದ್ದಳು.

ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಆರೋಪಿಯನ್ನು ಪೊಲೀಸ್ ಇಲಾಖೆಯಿಂದ ಅಮಾನತು ಮಾಡಲಾಗಿತ್ತು ಮತ್ತು ಇದೀಗ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (ಪೊಕ್ಸೊ) ಐಪಿಸಿ 305 ರ ಅಡಿ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ದಂಡ ಹಾಗೂ ಸೆಕ್ಷನ್ 12 ರ ಅಡಿ (ಪೊಕ್ಸೊ) 3 ವರ್ಷಗಳ ಕಠಿಣ ಸಜೆ ಹಾಗೂ 1000 ದಂಡ ವಿಧಿಸಿ ಆದೇಶ ಹೊರಡಿಸಿದೆ.



Join Whatsapp