ನ.26ರಂದು ಸಂವಿಧಾನ ದಿನ ಆಚರಣೆ, ರಾಷ್ಟ್ರಪತಿ ಕೋವಿಂದ್‌ ಅಧ್ಯಕ್ಷತೆ

Prasthutha|

ನವದೆಹಲಿ: ಇದೇ 26ರಂದು ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಸಂವಿಧಾನ ದಿನ ಆಚರಿಸಲಾಗುವುದು. ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌ ಅವರು ಅಧ್ಯಕ್ಷತೆ ವಹಿಸುವರು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಮತ್ತಿತರ ಗಣ್ಯರು ಭಾಗವಹಿಸುವರು ಎಂದರು.
ಲೋಕಸಭಾ ಸೆಕ್ರೆಟರಿಯೇಟ್‌ ಮತ್ತು ಸ್ಪೀಕರ್‌ ಅವರು ಕಾರ್ಯಕ್ರಮ ಆಯೋಜಿಸಿದ್ದಾರೆ.

Join Whatsapp