SDPI ವತಿಯಿಂದ ಮಂಗಳೂರಿನಲ್ಲಿ ಅ. 25 ರಂದು ‘ಸಂವಿಧಾನ ದೀಕ್ಷೆ’

Prasthutha|

ಮಂಗಳೂರು : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಪ್ ಇಂಡಿಯಾ ದ.ಕ ಜಿಲ್ಲಾ ಸಮಿತಿಯ ವತಿಯಿಂದ ಅಕ್ಟೋಬರ್ 25ರ ಸೋಮವಾರ ಸಂಜೆ 04:30 ಕ್ಕೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ “ಸಂವಿಧಾನ ದೀಕ್ಷೆ” ಕಾರ್ಯಕ್ರಮ ನಡೆಯಲಿದೆ ಎಂದು ನೂತನ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ತಿಳಿಸಿದ್ದಾರೆ.

- Advertisement -


ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುವಾದ ಶಕ್ತಿಗಳ ಅಟ್ಟಹಾಸ ಮಿತಿಮೀರುತ್ತಿದ್ದು ಜಿಲ್ಲೆಯ ಶಾಂತಿ ಸುವ್ಯವಸ್ಥೆಗೆ ಮಾರಕವಾಗುತ್ತಿದೆ. ಕಾಲೇಜಿನ ಸಹಪಾಠಿ ವಿದ್ಯಾರ್ಥಿಗಳು ಪರಸ್ಪರ ಮಾತನಾಡಿದರೆ ಒಂದೇ ವಾಹನದಲ್ಲಿ ಸಂಚರಿಸಿದರೆ ಇದನ್ನೇ ನೆಪ ಮಾಡಿಕೊಂಡು ಅವರ ಮೇಲೆ ದಾಳಿ ಮಾಡುವುದು, ಹಲ್ಲೆ ಮಾಡುವುದು, ಅನೈತಿಕ ಪೋಲಿಸ್‌ಗಿರಿ ಮತ್ತು ಧರ್ಮದ ಹೆಸರಿನಲ್ಲಿ ಪರಸ್ಪರ ಎತ್ತಿಕಟ್ಟುವುದು ಅಲ್ಪಸಂಖ್ಯಾತ ಸಮುದಾಯವನ್ನು ಗುರಿ ಪಡಿಸಿಕೊಂಡು ವ್ಯವಸ್ಥಿತ ಷಡ್ಯಂತ್ರ, ಪ್ರಚೋದನಕಾರಿ ಹೇಳಿಕೆಗಳು ನಿರಂತರವಾಗಿ ನಡೆಯುತ್ತಿವೆ ಎಂದು ಅವರು ಆರೋಪಿಸಿದರು.


ಧಾರ್ಮಿಕ ಆಚರಣೆಯ ಹೆಸರಿನಲ್ಲಿ ತ್ರಿಶೂಲ ವಿತರಣೆ, ಮಾರಕಾಸ್ತ್ರಗಳಿಗೆ ಪೂಜೆ ಸಲ್ಲಿಸುವುವಂತಹ ಅಪಾಯಕಾರಿ ಚಟುವಟಿಕೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ಇದಕ್ಕೆಲ್ಲಾ ಬೆಂಬಲ ನೀಡುವಂತಹ ರೀತಿಯಲ್ಲಿ ರಾಜ್ಯದ ಮುಖ್ಯ ಮಂತ್ರಿಗಳ ಹೇಳಿಕೆ ಕಿಡಿಗೇಡಿಗಳಿಗೆ ಪ್ರೋತ್ಸಾಹ ಹಾಗೂ ಕುಮ್ಮಕ್ಕು ನೀಡಿದಂತಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಿ ಜಿಲ್ಲೆಯ ನಾಗರಿಕರಿಗೆ ರಕ್ಷಣೆ ನೀಡಬೇಕಾದ ರಾಜ್ಯದ ಮುಖ್ಯ ಮಂತ್ರಿಗಳ ಇಂತಹ ಅಸಂವಿಧಾನಿಕ ಹೇಳಿಕೆಗಳಿಂದ ಜಿಲ್ಲೆಯ ಜನತೆ ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತರು, ದಲಿತರು ಆತಂಕ ಹಾಗೂ ಭಯಬೀತರಾಗಿದ್ದಾರೆ ಎಂದರು.

- Advertisement -


ಇಂತಹ ಪರಿಸ್ಥಿತಿಯಲ್ಲಿ ಜನಸಾಮಾನ್ಯರಿಗೆ ಧೈರ್ಯ ತುಂಬಿ, ಅವರಿಗೆ ಆತ್ಮವಿಶ್ವಾಸ ನೀಡಲು, ಸಂವಿಧಾನಾತ್ಮಕವಾಗಿ ಜಾಗೃತಿ ಗೊಳಿಸಲು, ಸಂವಿಧಾನವು ನಮಗೆ ಕೊಟ್ಟಂತಹ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ “ಸಂವಿಧಾನ ದೀಕ್ಷೆ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಎಸ್ ಡಿಪಿಐ ರಾಜ್ಯ ಕರ್ಯುಕಾರಣಿ ಸದಸ್ಯರು, ಖ್ಯಾತ ದಲಿತ ಹೋರಾಟಗಾರರು ಆದ ಬಿ.ಆರ್. ಬಾಸ್ಕರ್ ಪ್ರಸಾದ್ ರವರು ಭಾಗವಹಿಸಿ ಜನರಿಗೆ ಸಂವಿಧಾನದ ಮಹತ್ವವನ್ನು ವಿವರಿಸಲಿದ್ದಾರೆ ಎಂದು ತಿಳಿಸಿದರು

ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಯ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್ , ಜಿಲ್ಲಾ ಪ್ರ. ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ನಿಕಟಪೂರ್ವ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಜಿಲ್ಲಾ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ, ಶಾಕಿರ್ ಅಳಕೆಮಜಲು, ಸುಹೈಲ್ ಖಾನ್, ಜಿಲ್ಲಾ ಕೋಶಾಧಿಕಾರಿ ಮುಹಮ್ಮದ್ ಇಕ್ಬಾಲ್ ಐ.ಎಮ್.ಆರ್ ಉಪಸ್ಥಿತಿ ಇದ್ದರು.

Join Whatsapp