ಭಾರತೀಯರಿಗೆ ಸಂವಿಧಾನವೇ ಭಗವದ್ಗೀತೆ, ಬೈಬಲ್, ಕುರಾನ್: ಬಿಜೆಪಿಗೆ ಪರಮೇಶ್ವರ್ ತಿರುಗೇಟು

Prasthutha|

ಬೆಂಗಳೂರು: ಬಿಜೆಪಿಯವರು ಈಗ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಮಾತಾಡ್ತಿದ್ದಾರೆ. ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನವೇ ಭಗವದ್ಗೀತೆ, ಬೈಬಲ್, ಕುರಾನ್. ಸಂವಿಧಾನವೇ ಭಾರತೀಯರಿಗೆ ಗ್ರಂಥ ಇದ್ದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಂ 25ರಲ್ಲಿ ಪ್ರತಿಯೊಬ್ಬರಿಗೂ ಧರ್ಮ ಆಯ್ಕೆಯ ಹಕ್ಕು ನೀಡಿದೆ. ಅದಕ್ಕೆ ವಿರುದ್ಧವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದ್ದರು. ಈ ಕಾಯ್ದೆ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಅಂದೇ ಹೇಳಿದ್ದೆವು. ನಮ್ಮ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದೆ. ಹಾಗಾಗಿ ನಾವು ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುತ್ತಿದ್ದೇವೆ ಎಂದರು.

ಈಗ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ನಮ್ಮ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದೆ. ಹಾಗಾಗಿ ನಾವು ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದುಕೊಳ್ಳುತ್ತಿದ್ದೇವೆ. ಇನ್ನು ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ವಿಚಾರವಾಗಿ ಮಾತನಾಡಿ ಬಿಜೆಪಿಯವರನ್ನ ಕೇಳಿಕೊಂಡು ಅಧಿಕಾರ ಮಾಡಲು ಆಗೋದಿಲ್ಲ. ನಾವು ಈಗಾಗಲೇ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ. ಅದರಂತೆ ಗ್ಯಾರಂಟಿಗಳನ್ನ ಜಾರಿಗೊಳಿಸುತ್ತೇವೆ ಎಂದು ವಾಗ್ದಾಳಿ ಮಾಡಿದರು.

Join Whatsapp