ಸಂವಿಧಾನವು ಪ್ರಜಾಪ್ರಭುತ್ವದ ಆತ್ಮ: ಅಮಿತ್ ಶಾ

Prasthutha|

ನವದೆಹಲಿ: ನಮ್ಮ ಸಂವಿಧಾನವು ಪ್ರಜಾಪ್ರಭುತ್ವದ ಆತ್ಮ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಸಂವಿಧಾನ ದಿನದ ಅಂಗವಾಗಿ ಟ್ವೀಟ್ ಮೂಲಕ ಶುಭಾಶಯ ತಿಳಿಸಿರುವ ಅವರು ಸಂವಿಧಾನವು ಪ್ರಜಾಪ್ರಭುತ್ವ ವ್ಯವಸ್ಥೆಯ ಆತ್ಮ ಇದ್ದ ಹಾಗೆ ಮತ್ತು ರಾಷ್ಟ್ರದ ಏಕತೆ ಹಾಗೂ ಪ್ರಗತಿಗೆ ಆಧಾರವಿದ್ದಂತೆ ಎಂದು ಹೇಳಿದರು. ನಮ್ಮ ಸರಕಾರವು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಮಾರ್ಗದರ್ಶನವನ್ನು ಅನುಸರಿಸುತ್ತದೆ ಎಂದು ಹೇಳಿದ್ದಾರೆ.

- Advertisement -

 ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಾಷ್ಟ್ರದ ಎಲ್ಲ ವರ್ಗದ ಜನರ ಅಭಿವೃದ್ಧಿ ಕೈಗೊಳ್ಳಲು ಮತ್ತು ಹಕ್ಕುಗಳನ್ನು ಕಾಯ್ದುಕೊಳ್ಳಲು ಬದ್ಧವಾಗಿದೆ ಎಂದು ಸಚಿವ ಅಮಿತ್‌ ಶಾ ಹೇಳಿದರು.

Join Whatsapp