ದೇಶದಲ್ಲಿ ಸಾಂವಿಧಾನಿಕ ಮೌಲ್ಯಗಳು ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ: ಕೇರಳ ಮುಖ್ಯಮಂತ್ರಿ

Prasthutha|

ತಿರುವನಂತಪುರ: ದೇಶದಲ್ಲಿ ಸಾಂವಿಧಾನಿಕ ಮೌಲ್ಯಗಳು ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -

 ತಮ್ಮ ಸಂವಿಧಾನ ದಿನಾಚರಣೆ ಸಂದೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಒಕ್ಕೂಟದಂತಹ ಸಾಂವಿಧಾನಿಕ ಮೌಲ್ಯಗಳು ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದು, ರಾಜ್ಯಗಳು ನಿಜವಾದ ಫೆಡರಲ್ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಅಡೆತಡೆಗಳು ಸೃಷ್ಟಿಯಾಗುತ್ತಿವೆ ಎಂದು ಹೇಳಿದ್ದಾರೆ.

“ಆಯಾ ರಾಜ್ಯಗಳ ಜನರಿಂದ ಆಯ್ಕೆಯಾದ ರಾಜ್ಯ ಸರ್ಕಾರಗಳು ದೇಶದ ಅಭಿವೃದ್ಧಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ಸಮಾನ ಪಾತ್ರ ವಹಿಸಬೇಕು ಎಂಬ ಮೂಲಭೂತ ಪ್ರಜಾಸತ್ತಾತ್ಮಕ ತತ್ವವನ್ನು ಮರೆಯಲಾಗುತ್ತಿದೆ. ನಮ್ಮ ಸಾಮ್ರಾಜ್ಯಶಾಹಿ-ವಿರೋಧಿ ಹೋರಾಟದ ಆದರ್ಶಗಳನ್ನು ಒಳಗೊಂಡಿರುವ ಭಾರತದ ಸಂವಿಧಾನವು ಅದರ 73ನೇ ವಾರ್ಷಿಕೋತ್ಸವದಲ್ಲಿ ವ್ಯಾಪಕವಾದ ಸವಾಲುಗಳನ್ನು ಎದುರಿಸುತ್ತಿದೆ. ಅಂತಹ ಅಪಾಯಗಳನ್ನು ಹಿಮ್ಮೆಟ್ಟಿಸಲು ಮತ್ತು ಸಂವಿಧಾನದ ಆತ್ಮ ಮತ್ತು ಮೌಲ್ಯಗಳನ್ನು ರಕ್ಷಿಸಲು ಹೋರಾಡುವ ಸಮಯ ಇದು” ಎಂದು ವಿಜಯನ್ ಹೇಳಿದ್ದಾರೆ.



Join Whatsapp