ರಾಮನಗರ: ನಗರದ ಹೊರವಲಯದಲ್ಲಿರುವ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಲಾಗಿದೆ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ರಾಮನ ಪಾದಸ್ಪರ್ಶವಾದ ಜಾಗದಲ್ಲಿ ಒಳ್ಳೆಯ ದೇಗುಲ ನಿರ್ಮಾಣವಾಗುತ್ತದೆ. ಈ ಬಗ್ಗೆ ಪ್ರವಾಸೋದ್ಯಮ ಇಲಾಖೆ ಸಚಿವರ ಜೊತೆಗೂ ಚರ್ಚೆ ಮಾಡಲಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ಅನುದಾನ ನಿಗದಿಯಾಗಲಿದೆ ಎಂದಿದ್ದಾರೆ.
ಬಿಜೆಪಿಯವರಿಗೆ ರಾಮನ ವಿಚಾರ ಹೊಸದೇ ಹೊರತು ನಮಗಲ್ಲ. ಈ ಮಣ್ಣಿನಲ್ಲಿ ಎಲ್ಲಾ ಧರ್ಮಗಳಿಗೂ ಗೌರವವಿದೆ. ಆದರೆ, ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ನಾಯಕರು ಗೈರಾಗುವ ಕುರಿತ ಪ್ರಶ್ನೆಗೆ ಇಕ್ಬಾಲ್ ಹುಸೇನ್ ಉತ್ತರಿಸಿದ್ದಾರೆ.