ಮಂಗಳೂರು, ಕಾರವಾರದಲ್ಲಿ ಬಂದರು ನಿರ್ಮಾಣ: ಮಂಕಾಳ್ ವೈದ್ಯ

Prasthutha|

ಬೆಂಗಳೂರು: ಮಂಗಳೂರು ಮತ್ತು ಕಾರವಾರದಲ್ಲಿ ಬಂದರು ನಿರ್ಮಾಣ ಮಾಡಲಾಗುತ್ತದೆ ಎಂದು ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ಮಂಕಾಳ್ ವೈದ್ಯ ತಿಳಿಸಿದ್ದಾರೆ.

- Advertisement -

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳು ಸಭೆ ವಿಧಾನಸೌಧದಲ್ಲಿ ನಡೆಯಿತು. ಸಭೆ ಬಳಿಕ ಮಾತನಾಡಿದ ಸಚಿವ ಮಂಕಾಳ್ ವೈದ್ಯ, ಕಾರವಾರ, ಮಂಗಳೂರಿನಲ್ಲಿ ಬಂದರು ಮಾಡಲು ಇವತ್ತಿನ ಸಭೆಯಲ್ಲಿ ಚರ್ಚೆಯಾಗಿದೆ. 1 ಕೋಟಿ ರೂ. ನಿಂದ 1 ಸಾವಿರ ಕೋಟಿ ರೂ.ನಲ್ಲಿ ಬಂದರು ಮಾಡಬಹುದು. ಯಾವ ಮಾದರಿಯಲ್ಲಿ ಬಂದರು ಮಾಡಬೇಕು ಎಂದು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ. ಮಾರುಕಟ್ಟೆ ಮತ್ತು ಪ್ರವಾಸೋದ್ಯಮ ಗಮನದಲ್ಲಿಟ್ಟುಕೊಂಡು ಬಂದರು ಮಾಡಲು ಚರ್ಚೆಯಾಗಿದೆ. ಆದಷ್ಟು ಬೇಗ ಇದಕ್ಕೆ ಬ್ಲೂ ಪ್ರಿಂಟ್ ರೆಡಿ ಮಾಡುವುದಾಗಿ ತಿಳಿಸಿದರು.



Join Whatsapp