ಪೊಲೀಸರಿಗೆ ಗುಣಮಟ್ಟದ ಸುಸಜ್ಜಿತ ವಸತಿಗೃಹ ನಿರ್ಮಾಣ: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ರಾಜ್ಯದಲ್ಲಿ ಪೊಲೀಸರಿಗೆ ಗುಣಮಟ್ಟದ ಮತ್ತು ಸುಸಜ್ಜಿತ ವಸತಿ ಸೌಲಭ್ಯ ಕಲ್ಪಿಸಲು 20 ಸಾವಿರ ವಸತಿಗೃಹಗಳನ್ನು ನಿರ್ಮಿಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು .

- Advertisement -

200 ಕೋಟಿ ರೂ. ವೆಚ್ಚದಲ್ಲಿ ಈ ವರ್ಷ 100 ಪೊಲೀಸ್‌ ಠಾಣೆಗಳನ್ನು ನಿರ್ಮಿಸಲಾಗುತ್ತಿದ್ದು, ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯ ಜಾಗದ ವಿವಾದ ಅಂತ್ಯ ಕಾಣಲಿದೆ. ಪೊಲೀಸರ ಭತ್ತೆ ಹಾಗೂ ಗಳಿಕೆ ರಜೆಗಳಲ್ಲಿನ ವ್ಯತ್ಯಾಸದ ಬಗ್ಗೆ ಸಹಾನೂಭೂತಿ ಇದೆ. ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದುಅವರು  ಹೇಳಿದರು.

ಹಲವು ವರ್ಷಗಳ ಕಾಲ ಮನೆ, ಕುಟುಂಬದಿಂದ ದೂರ ಇದ್ದು ದೇಶಕ್ಕೆ ಸೇವೆ ಸಲ್ಲಿಸಿ ತಾಯ್ನಾಡಿಗೆ ಬಂದು ಪೊಲೀಸ್‌ ಸೇವೆಗೆ ಸೇರಿಕೊಳ್ಳುವ ನಿವೃತ್ತ ಸೈನಿಕರಿಗೆ ವರ್ಗಾವಣೆ ಅವಧಿಯನ್ನು 7 ವರ್ಷ ಇದ್ದದ್ದನ್ನು ಸಡಿಲಗೊಳಿಸಿ ಅವರ ತವರು ಜಿಲ್ಲೆಯಲ್ಲಿ ಕೆಲಸ ಮಾಡಲು ಅನುಕೂಲ ಮಾಡಿಕೊಡಬೇಕು. ಕಾನೂನು-ನಿಯಮಗಳಿಗಿಂತ ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ಪರಿಗಣಿಸಬೇಕು ಎಂದು ಜೆಡಿಎಸ್‌ ಸದಸ್ಯ ಕೆ.ಟಿ. ಶ್ರೀಕಂಠೇಗೌಡ  ಈ ವೇಳೆ ಮನವಿ ಮಾಡಿದರು.

Join Whatsapp
Exit mobile version