ಆದಿವಾಸಿ ಕುಟುಂಬಗಳ ಸಮಸ್ಯೆಗಳ ಬಗ್ಗೆ ಸಮಾಲೋಚನ ಸಭೆ

Prasthutha|

ಮಡಿಕೇರಿ: ಪರಿಶಿಷ್ಟ ಪಂಗಡದ ಆದಿವಾಸಿ ಕುಟುಂಬಗಳ ವಿವಿಧ ಸಮಸ್ಯೆಗಳ ಕುರಿತು ಕೊಡಗು ಜಿಲ್ಲೆಯ ಪರಿಶಿಷ್ಟ ಪಂಗಡ ವಿವಿಧ ಸಂಘಟನೆಗಳ ಮುಖಂಡರ ಜೊತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅಧ್ಯಕ್ಷತೆಯಲ್ಲಿ  ಸಮಾಲೋಚನಾ ಸಭೆ ನಡೆಯಿತು. 

- Advertisement -

ಸಭೆಯ ಆರಂಭದಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಪರಶುರಾಮ ಅವರು ಹೈಸೊಡ್ಲೂರು ಗ್ರಾಮದಲ್ಲಿ 8 ಎಕರೆ ಜಾಗವಿದ್ದು, ನಿವೇಶನ ರಹಿತ ಪರಿಶಿಷ್ಟ ಪಂಗಡ ಆದಿವಾಸಿ ಕುಟುಂಬದವರಿಗೆ ನಿವೇಶನ ಹಂಚಿಕೆ ಮಾಡಬೇಕು. ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು. ಲೈನ್ಮನೆಗಳಲ್ಲಿ ಆದಿವಾಸಿಗಳು ಟಾರ್ಪಲ್ ಹೊದಿಕೆ ನಿರ್ಮಿಸಿಕೊಂಡು ತುಂಬಾ ಕಷ್ಟದಲ್ಲಿ ಬದುಕು ಸವೆಸುತ್ತಿದ್ದಾರೆ. ಇವರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದರು. 

ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಗ್ರಾಮ ಪಂಚಾಯಿತಿನಲ್ಲಿ ವಸತಿ ಹಾಗೂ ನಿವೇಶನ ರಹಿತರ ಪಟ್ಟಿ ಇದ್ದು, ಅದರಂತೆ ಕ್ರಮವಹಿಸಲಾಗುವುದು. ಶಾಲೆ, ಅಂಗನವಾಡಿ ಪ್ರಥಮ ಆದ್ಯತೆ ನೀಡಲಾಗುವುದು. ಉಳಿದಂತೆ ನಿವೇಶನ ರಹಿತರಿಗೆ ನಿವೇಶನ ಒದಗಿಸಲಾಗುವುದು ಎಂದು ಅವರು ಹೇಳಿದರು. ಬಸವ, ಅಂಬೇಡ್ಕರ್, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಮನೆ ನಿರ್ಮಿಸಲಾಗುವುದು. 94ಸಿ ನಡಿ ಮಾರ್ಚ್ 31 ರವರೆಗೂ ಅರ್ಜಿ ಸಲ್ಲಿಸಲು ಕಾಲಾವಕಾಶವಿದೆ. ಅರ್ಹರು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು. 

- Advertisement -

ಕುಡಿಯರ ಮುತ್ತಪ್ಪ ಅವರು ಮಾತನಾಡಿ 94 ಸಿ ನಲ್ಲಿ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ ಕೇಳುತ್ತಾರೆ. ಹಲವು ಕುಟುಂಬಗಳಲ್ಲಿ ಈ ಗುರುತಿನ ಚೀಟಿಗಳೇ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.



Join Whatsapp