ನ್ಯಾಯಾಂಗ ನಿಂದನೆ ಪ್ರಕರಣ: ವಕೀಲರನ್ನು ಜೈಲಿಗೆ ಕಳುಹಿಸಿದ ಹೈಕೋರ್ಟ್

Prasthutha|

ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಲ್ಲಿ ವಕೀಲರೊಬ್ಬರನ್ನು ಕರ್ನಾಟಕ ಹೈಕೋರ್ಟ್ ಒಂದು ವಾರ ಜೈಲಿಗೆ ಕಳುಹಿಸಿದೆ.

- Advertisement -


ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ವಿಭಾಗೀಯ ಪೀಠವು ಫೆಬ್ರವರಿ 2 ರಂದು ವಕೀಲ ಕೆ.ಎಸ್. ಅನಿಲ್ ವಿರುದ್ಧ 2019 ರಲ್ಲಿ ದಾಖಲಾಗಿದ್ದ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಈ ಆದೇಶವನ್ನು ಹೊರಡಿಸಿದೆ.
“ನ್ಯಾಯಾಂಗ ನಿಂದನೆ ಮಾಡಿದ್ದಕ್ಕಾಗಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಆದೇಶವನ್ನು ಹೊರಡಿಸುವುದನ್ನು ಬಿಟ್ಟು ಈ ನ್ಯಾಯಾಲಯಕ್ಕೆ ಬೇರೆ ಆಯ್ಕೆಗಳಿಲ್ಲ” ಎಂದು ನ್ಯಾಯಪೀಠ ಹೇಳಿದೆ.


ಅನಿಲ್ ಅವರನ್ನು ಒಂದು ವಾರದ ಅವಧಿಗೆ ನ್ಯಾಯಾಂಗ ಬಂಧನಕ್ಕೆ ತೆಗೆದುಕೊಂಡು ಮುಂದಿನ ವಿಚಾರಣೆಯ ದಿನಾಂಕವಾದ ಫೆಬ್ರವರಿ 10 ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿತು.

- Advertisement -


ನ್ಯಾಯಾಲಯದ ಮುಂದೆ ಹಾಜರಾದ ಆರೋಪಿ, ತಮಗೆ ಸಮರ್ಪಕವಾಗಿ ನೋಟಿಸ್ ನೀಡಲಾಗಿಲ್ಲ ಎಂದು ವಾದಿಸಿದರು. ನಂತರ ಅವರು 13.01.2023 ರ ಆದೇಶದಲ್ಲಿ ಮಾಡಿದ ಅವಲೋಕನಗಳು ಆ ದಿನ ಸಂಭವಿಸಿದ ಘಟನೆಗಳಿಗೆ ಅನುಗುಣವಾಗಿಲ್ಲ ಎಂದು ವಾದ ಮಂಡಿಸಿದರು.
ಮುಖ್ಯ ನ್ಯಾಯಮೂರ್ತಿ ಮತ್ತು ಹಾಲಿ ನ್ಯಾಯಾಧೀಶರ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಾಂಗ ಇಲಾಖೆ ಮತ್ತು ಇತರರ ಮುಂದೆ ದೂರು ದಾಖಲಿಸಿರುವುದರಿಂದ ಈ ವಿಷಯವನ್ನು ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಕೋರಿ ಆರೋಪಿ ಸಲ್ಲಿಸಿದ ಮೆಮೋ ಮತ್ತು ಲಿಖಿತ ಸಲ್ಲಿಕೆಯನ್ನು ನ್ಯಾಯಪೀಠ ಪರಿಶೀಲಿಸಿ, ಬಳಿಕ ಒಂದು ವಾರ ಕಾಲ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.



Join Whatsapp