ನವದೆಹಲಿ: ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒಬ್ರೇನ್ ಹೇಳಿದ್ದಾರೆ. ಅಸ್ಸಾಂನ ಕೆಲವು ಕ್ಷೇತ್ರಗಳಲ್ಲಿ ಹಾಗೂ ಮೇಘಾಲಯದ ಒಂದು ಕ್ಷೇತ್ರದಲ್ಲಿಯೂ ಪಕ್ಷ ಸ್ಪರ್ಧಿಸಲಿದೆ ಎಂದೂ ಅವರು ಹೇಳಿದ್ದಾರೆ.
ಕೆಲವು ವಾರಗಳ ಹಿಂದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಂಗಾಳದ ಎಲ್ಲಾ 42 ಸ್ಥಾನಗಳಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದರು. ನಾವು ಅಸ್ಸಾಂನ ಕೆಲವು ಕ್ಷೇತ್ರಗಳಲ್ಲಿ ಮತ್ತು ಮೇಘಾಲಯದ ತುರಾ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.