ಚನ್ನಪಟ್ಟಣದಲ್ಲಿ ಸ್ಪರ್ಧೆ: ಸ್ಥಳೀಯ, ಜಿಲ್ಲಾ ನಾಯಕರ ಅಭಿಪ್ರಾಯ ಸಂಗ್ರಹಿಸಿದ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

Prasthutha|

ರಾಮನಗರ: ಉಪ ಚುನಾವಣೆಯಲ್ಲಿ SDPI ತನ್ನದೇ ಆದ ಅಭ್ಯರ್ಥಿಯನ್ನು ಸ್ಪರ್ಧಿಸುವ ಕುರಿತು ರಾಜ್ಯ ಸಮಿತಿಯಲ್ಲಿ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ‌

- Advertisement -

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೆತ್ರ ಸಮಿತಿಯ ಜಂಟಿ ಸಭೆ ಮುಂದಿನ ಚನ್ನಪಟ್ಟಣ ಉಪ ಚುನಾವಣೆಯಲ್ಲಿ SDPI ಸ್ಪರ್ಧೆ ಮಾಡುವ ಬಗ್ಗೆ ಜಿಲ್ಲಾ ಮತ್ತು ಕ್ಷೇತ್ರ ಸಮಿತಿ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಿದ ನಂತರ ಅವರು ಮಾತನಾಡಿದ ಅವರು, ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಉಪ ಚುನಾವಣೆಯನ್ನು ಎದುರಿಸಲು ಸಿದ್ಧರಾಗಬೇಕು ಎಂದು ಕರೆ ನೀಡಿದರು.

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಏಕೈಕ ಉದ್ದೇಶದೊಂದಿಗೆ ದಲಿತ ಮತ್ತು ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿತ್ತು. ಆದರೆ ಅಲ್ಪಸಂಖ್ಯಾತರ ಮತಗಳನ್ನು ಪಡೆದ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ಸ್ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. 45 ವಿಶ್ವ ವಿದ್ಯಾಲಯಗಳಲ್ಲಿ, ಒಬ್ಬನೇ ಒಬ್ಬ ಮುಸ್ಲಿಂ ಉಪ ಕುಲಪತಿ ಇಲ್ಲ. ಸರ್ಕಾರದ ಈ ನಿಲುವು ಅತ್ಯಂತ ಖಂಡನೀಯ. ಇಂತಹ ಸಂಧಿಗ್ಧ ಪರಿಸ್ಥಿತಿಯಲ್ಲಿ ನಾವು ಮೌನವಹಿಸಿ ಸುಮ್ಮನೆ ಕುಳಿತು ಕೊಳ್ಳಲು ಸಾಧ್ಯವಿಲ್ಲ. ನಮ್ಮ ಪಕ್ಷ ಹೋರಾಟ ಮತ್ತು ಚುನಾವಣಾ ರಾಜಕಾರಣ ಈ ಎರಡರಲ್ಲೂ ಬಹಳ ಸಕ್ರಿಯವಾಗಿ ಪಾಲ್ಗೊಂಡಿದೆ ಹಾಗೂ ಪಾಲ್ಗೊಳ್ಳುತ್ತದೆ. ಚನ್ನ ಪಟ್ಟಣ ಉಪ ಚುನಾವಣೆಯಲ್ಲಿ SDPI ತನ್ನದೇ ಆದ ಅಭ್ಯರ್ಥಿಯನ್ನು ಸ್ಪರ್ಧಿಸುವ ಕುರಿತು ರಾಜ್ಯ ಸಮಿತಿಯಲ್ಲಿ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ ಎಂದು ಅಬ್ದುಲ್ ಮಜೀದ್ ಹೇಳಿದ್ದಾರೆ‌

- Advertisement -

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ, ರಾಜ್ಯ ಸಮಿತಿ ಸದಸ್ಯರಾದ ಅಬ್ರಾರ್ ಆಹಮ್ಮದ್, ಜಿಲ್ಲಾಧ್ಯಕ್ಷರಾದ ಶಹಬಾಜ್, ಪ್ರಧಾನ ಕಾರ್ಯದರ್ಶಿಯಾದ ಅಮ್ಜದ್ , ಕಾರ್ಯದರ್ಶಿಯಾದ ವಸೀಂ ಪಾಷ, ಜಿಲ್ಲಾ ಸಮಿತಿ ಸದಸ್ಯರಾದ ನಿಸಾರ್ ಆಹಮ್ಮದ್, ವಸೀಮ್ ಖಾನ್, ಚನ್ನಪಟ್ಟಣ ತಾಲ್ಲೂಕು ಅಧ್ಯಕ್ಷರಾದ ಮೊಹಮ್ಮದ್ ಫಾಜೀಲ್, ಕಾರ್ಯದರ್ಶಿಯಾದ ಆಹಮ್ಮದ್ ಷರೀಫ್ ಹಾಗೂ ತಾಲೂಕು ಸಮಿತಿ ಸದಸ್ಯರು ಉಪಸ್ಥಿರಿದ್ದರು.

Join Whatsapp
Exit mobile version