ಬೆಳಗಾವಿಯಿಂದ ಸ್ಪರ್ಧೆ: ಇನ್ನೂ ತೀರ್ಮಾನಿಸಿಲ್ಲ ಎಂದ ಶೆಟ್ಟರ್

Prasthutha|

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಪಕ್ಷದ ವರಿಷ್ಠರು ನನ್ನ ಜೊತೆ ಚರ್ಚೆ ಮಾಡುತ್ತಿದ್ದಾರೆ. ಆದರೆ, ನಾನಿನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಕ್ಷದ ವರಿಷ್ಠರು ಹಾಗೂ ಬೆಳಗಾವಿಯ ಮುಖಂಡರ ಜೊತೆ ಚರ್ಚಿಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಬಿಜೆಪಿ ಮುಖಂಡ ಜಗದೀಶ ಶೆಟ್ಟರ್ ಹೇಳಿದರು.

- Advertisement -


ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದಕ್ಕೂ ಮುಂಚೆ ಧಾರವಾಡ, ಹಾವೇರಿ ಕ್ಷೇತ್ರದ ಬಗ್ಗೆ ಚರ್ಚೆಯಾಗಿತ್ತು. ನಾನು ಆಸಕ್ತಿ ಹೊಂದಿದ್ದೆ ಎಂದು ವರಿಷ್ಠರ ಗಮನಕ್ಕೆ ತಂದಿದ್ದೆ. ಈಗ ಇವೆರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಅದರ ಬಗ್ಗೆ ಚರ್ಚಿಸಲ್ಲ’ ಎಂದರು.



Join Whatsapp