ಕರಾವಳಿಯಲ್ಲಿ ಮುಂದುವರೆದ ಮಳೆ ಅಬ್ಬರ: ಪ್ರವಾಹ ಭೀತಿ

Prasthutha|

- Advertisement -

ಮಂಗಳೂರು: ಕರಾವಳಿಯ ಹಲವು ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರುವ ಮೂಲಕ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ.

ದಕ್ಷಿಣದ ಪ್ರಮುಖ ನದಿಗಳಾದ ಕುಮಾರಧಾರೆ ಹಾಗೂ ನೇತ್ರಾವತಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಪ್ರವಾಹದ ಭೀತಿ ಎದುರಾಗಿವೆ. ಅಲ್ಲದೆ ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಹಲವೆಡೆ ಮನೆಗಳಿಗೆ ನೀರು ನುಗ್ಗಿವೆ. ಮಲೆನಾಡು ಮತ್ತು ಕರಾವಳಿಯಲ್ಲಿ ಮುಂದಿನ 24ಗಂಟೆ ವ್ಯಾಪಕ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದ್ದು ಅರೆಂಜ್ ಅಲರ್ಟ್ ಘೋಷಿಸಿದೆ.

- Advertisement -

ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆಯಾಗುತ್ತಿವೆ.

Join Whatsapp