Home ಟಾಪ್ ಸುದ್ದಿಗಳು ಮುಂದುವರಿದ ಇ.ಡಿ ವಿಚಾರಣೆ; ಮತ್ತೆ ಹಾಜರಾದ ಸೋನಿಯಾ ಗಾಂಧಿ

ಮುಂದುವರಿದ ಇ.ಡಿ ವಿಚಾರಣೆ; ಮತ್ತೆ ಹಾಜರಾದ ಸೋನಿಯಾ ಗಾಂಧಿ

ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಸೊನಿಯಾ ಗಾಂಧಿ ಮಂಗಳವಾರ ಇ.ಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಈಗಾಗಲೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿದೆ.

ಸೋನಿಯಾ ಗಾಂಧಿ ಅವರನ್ನು ಇಡಿ ಪ್ರಶ್ನಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ಸಂಸತ್ತಿನ ಆವರಣದಲ್ಲಿರುವ ಗಾಂಧಿ ಪ್ರತಿಮೆಯಿಂದ ವಿಜಯ್ ಚೌಕ್ ಕಡೆಗೆ ಮೆರವಣಿಗೆ ನಡೆಸಿದರು. ರಾಹುಲ್ ಗಾಂಧಿ ಕೂಡ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಈ ಬಗ್ಗೆ  ಆಕ್ರೋಶಗೊಂಡ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ಧಾರೆ.

Join Whatsapp
Exit mobile version