Home ಕರಾವಳಿ ಕೋವಿಡ್ ಹೆಚ್ಚಳ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಮುಂದುವರಿಕೆ

ಕೋವಿಡ್ ಹೆಚ್ಚಳ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಮುಂದುವರಿಕೆ

ಮಂಗಳೂರು: ಗಡಿ ರಾಜ್ಯ ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.3 ರ ಶುಕ್ರವಾರ ರಾತ್ರಿ 9ರಿಂದ  ಸೆ. 6 ಸೋಮವಾರ ಬೆಳಗ್ಗೆ 5 ರವರೆಗೆ ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದೆ.

ವಾರಾಂತ್ಯ ಕರ್ಫ್ಯೂ ಸೆ.13 ರವರೆಗೆ ವಿಸ್ತರಿಸಲಾಗಿದ್ದು, ಈ ಅವಧಿಯಲ್ಲಿ, ತುರ್ತು ಸಂದರ್ಭ ಹೊರತುಪಡಿಸಿ ಸಾರ್ವಜನಿಕರ ಓಡಾಟ ನಿಷೇಧಿಸಲಾಗಿದೆ. ತುರ್ತು, ಅವಶ್ಯಕ ಸೇವೆಗಳು, ರಾಜ್ಯ ಮತ್ತು ಕೇಂದ್ರ ಸರಕಾರಿ ಕಚೇರಿಗಳು, ಸ್ವಾಯತ್ತ ಸಂಸ್ಥೆಗಳು, ನಿಗಮ ಕಾರ್ಯನಿರ್ವಹಣೆಗೆ ಅವಕಾಶ, ತುರ್ತು ಮತ್ತು ಅತ್ಯವಶ್ಯಕ ಸೇವೆಗಳ ನಿರ್ವಹಿಸುವ ಎಲ್ಲ ಕೈಗಾರಿಕೆ, ಕಂಪನಿಗೆ ಅವಕಾಶ, ತುರ್ತು ಚಿಕಿತ್ಸೆಗಾಗಿ ಸಂಚರಿಸಬೇಕಾದ ಅಗತ್ಯವಿರುವ ರೋಗಿಗಳು, ಅವರ ಪರಿಚಾರಕರು, ಲಸಿಕೆ ಹಾಕಿಸಿಕೊಳ್ಳಲು ಉದ್ದೇಶಿಸಿರುವ ವ್ಯಕ್ತಿಗಳಿಗೆ ಅವಕಾಶ ನೀಡಲಾಗಿದೆ.

ಆಹಾರ, ದಿನಸಿ, ಹಣ್ಣುಗಳು, ತರಕಾರಿ, ಮಾಂಸ ಮತ್ತು ಮೀನು ಮತ್ತು ಪ್ರಾಣಿಗಳ ಮೇವನ್ನು ಮಾರಾಟ ಮಾಡುವ ಅಂಗಡಿಗಳು, ವ್ಯಾಪಾರಸ್ಥರು, ನ್ಯಾಯಬೆಲೆ ಬೀದಿಬದಿ ಅಂಗಡಿಗಳು, ಮದ್ಯದಂಗಡಿಗಳು ಮತ್ತು ಹೊಟೇಲ್ ಗಳಲ್ಲಿ ಆಹಾರವನ್ನು ಪಾರ್ಸೆಲ್ ಕೊಂಡು ಹೋಗಲು ಮಾತ್ರ ಅನುಮತಿಸಲಾಗಿದ್ದು, ಬಸ್ ಹಾಗೂ ರೈಲು ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

Join Whatsapp
Exit mobile version