ಕಾಫಿನಾಡ ಮಲೆನಾಡು ಭಾಗದಲ್ಲಿ ಮುಂದುವರಿದ ಗಾಳಿ- ಮಳೆ ; ಕೊಚ್ಚಿ ಹೋದ ರಸ್ತೆ

Prasthutha|

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಗಾಳಿ- ಮಳೆ ಮುಂದುವರಿದಿದ್ದು ಕೊಪ್ಪ ತಾಲೂಕಿನ ಹೆಗ್ಗಾರು ಕೂಡಿಗೆಯಲ್ಲಿ ರಸ್ತೆ ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿದೆ.

- Advertisement -

ಇದು ಮೇಗೂರು, ಕೊಗ್ರೆ, ತಲವಾನೆ ಸಹಿತ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿ ವಿದ್ಯಾರ್ಥಿಗಳು, ಜನಸಾಮಾನ್ಯರು ಪರದಾಡುವಂತಾಗಿದೆ.

ಈ ಬಗ್ಗೆ ಆಕ್ರೋಶಗೊಂಡ ಸ್ಥಳೀಯರು PWD ಇಂಜಿನಿಯರ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.



Join Whatsapp